ತುಮಕೂರು:
ಕೇಂದ್ರ ಸರ್ಕಾರವರು ದಿನೇ ದಿನೇ ಇಂಧನ ಬೆಲೆಯನ್ನು ಏರಿಕೆ ಮಾಡುತ್ತಿದ್ದು, ಇದರಿಂದ ಸಾರಿಗೆ ದರ ಹೆಚ್ಚಿಸುವುದು ಅನಿವಾರ್ಯವಾಗಲಿದೆ ಎಂದು ಪರಮೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ.
ತುಮಕೂರಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ 16 ಬಾರಿ ಇಂಧನ ಬೆಲೆ ಹೆಚ್ಚಳ ಮಾಡಿದ್ದಾರೆ. ಸತತ ಬೆಲೆ ಏರಿಕೆಯಿಂದ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡಬೇಕಾಗುತ್ತದೆ. ಇಲ್ಲದೇ ಇದ್ದರೆ ಸಂಸ್ಥೆ ನಷ್ಟಕ್ಕೆ ಗುರಿಯಾಗಬೇಕಾಗುತ್ತದೆ ಎಂದರು.
ತೈಲ ಉತ್ಪನ್ನ ರಾಷ್ಟ್ರಗಳಲ್ಲಿ ಪೆಟ್ರೋಲ್ ದರ ತೀರಾ ಕಡಿಮೆ ಇದೆ. ಹಾಗಾಗಿ ಭಾರತದಲ್ಲೂ ದರ ಕಡಿಮೆಯಾಗಬೇಕು. ಆದರೆ ಕೇಂದ್ರ ಸರ್ಕಾರ ಬೆಲೆ ಕಡಿಮೆ ಮಾಡುತ್ತಿಲ್ಲ. ಇದರಿಂದ ಜನಸಾಮಾನ್ಯರು ಪರದಾಡುವಂತಾಗಿದೆ ಎಂದು ಕಿಡಿಕಾರಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ