ತಿಪಟೂರು
ದೀಕ್ಷಾ ಹೆರಿಟೇಜ್ ಶಾಲೆಯಿಂದ ಪರಿಹಾರ ಸಾಮಗ್ರಿಗಳನ್ನು ನೇರವಾಗಿ ಸಂತ್ರಸ್ಥರಿಗೆ ತಲುಪಿಸುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಗೌರಮ್ಮನವರು ಶಾಲೆಯು ಉತ್ತಮವಾದ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತದೆ. ಕೊಡಗು ಮತ್ತು ಕೇರಳದಲ್ಲಿ ಸಂಭವಿಸಿರುವ ಪ್ರವಾಹ ಪರಿಸ್ಥಿತಿಯನ್ನು ಮಕ್ಕಳಿಗೆ ಮನದಟ್ಟುಮಾಡಿಕೊಟ್ಟು ಕಷ್ಟದಲ್ಲಿರುವವರಿಗೆ ಸಹಾಯಮಾಡುವ ಗುಣವನ್ನು ಶಾಲೆಯು ಮಕ್ಕಳಲ್ಲಿ ಬೆಳೆಸುತ್ತಿದೆ. ಈ ರೀತಿಯ ಕಾರ್ಯಕ್ರಮಗಳು ಮಕ್ಕಳಲ್ಲಿ ಜಾಗೃತಿಯನ್ನು ಮೂಡಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷರು, ಶಿಕ್ಷಕರುಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು