ಬೆಂಗಳೂರು:
ದುಡಿಯುವ ಕೈಗಳಿಗೆ ಉದ್ಯೋಗ ನೀಡುವ ದೃಷ್ಠಿಯಿಂದ ಈ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇಂದು ಆಯೋಜಿಸಲಾಗಿದ್ದ ಉದ್ಯೋಗಮೇಳಕ್ಕೆ ಚಾಲನೆ ನೀಡಿ, ಅವರು ಮಾತನಾಡುತ್ತಿದ್ದರು. ಮೈತ್ರಿ ಸರ್ಕಾರ ಬಂದ ಬಳಿಕ ಎರಡು ಅಧಿಕೃತ ಜನತಾ ದರ್ಶನ ನಡೆಸಿದ್ದೇನೆ. ಜನತಾ ದರ್ಶನದಲ್ಲಿ ಬಂದಿರುವ ಅರ್ಜಿಗಳನ್ನು ನಮ್ಮ ಸರಕಾರ ಲಘುವಾಗಿ ಪರಿಗಣಿಸಿಲ್ಲ. ಇದು ಕಾಟಾಚಾರದ ಉದ್ಯೋಗ ಮೇಳ ಅಲ್ಲ. ಯಾರಿಗಾದರೂ ಉದ್ಯೋಗ ಸಿಗಲಿಲ್ಲ ಅಂದರೆ ಮರಳಿ ಯತ್ನ ಮಾಡಿ ಉದ್ಯೋಗ ಸಿಕ್ಕೇ ಸಿಗುತ್ತದೆ ಎಂದರು. ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು ಬಂದಿದೀರಾ. ಅದು ಹುಸಿಯಾಗುವುದಿಲ್ಲ ಎಂಬ ನಂಬಿಕೆ ನನಗಿದೆ. ನಮ್ಮ ಮನವಿಗೆ ಸ್ಪಂದಿಸಿದ ಕಂಪನಿ ಮಾಲೀಕರಿಗೆ ಕೃತಜ್ಞತೆ ತಿಳಿಸಿದರು.
ಜನತಾ ದರ್ಶನದಲ್ಲಿ ಉದ್ಯೋಗಕ್ಕಾಗಿ 3,198 ನಿರುದ್ಯೋಗಿಗಳು ಅರ್ಜಿ ಸಲ್ಲಿಸಿದ್ದರು. 100ಕ್ಕೂ ಹೆಚ್ಚು ಪ್ರಮುಖ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಿವೆ. ಕೊಡಗು, ದೂರದ ಬೀದರ್ ಸೇರಿ ರಾಜ್ಯದ ಹಲವು ಜಿಲ್ಲೆಗಳಿಂದ ಯುವಕರು ಬಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ