ಬೆಂಗಳೂರು:
ಆತುರ ಬಿದ್ದು, ದುಡುಕಿನ ನಿರ್ಧಾರ ಕೈಗೊಳ್ಳದಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜಾರಕಿಹೊಳಿ ಸಹೋದರರಿಗೆ ಸಲಹೆ ನೀಡಿದರು.
ಖಾಸಗಿ ಹೋಟೆಲ್‍ನಲ್ಲಿ ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಸಿ.ಎಂ. ಸಲಹೆ ನೀಡಿ,ರಾಜಕೀಯ ಭವಿಷ್ಯ ಇಟ್ಟುಕೊಂಡು ಮಾತನಾಡಿ, ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ, ಸಚಿವ ರಮೇಶ್ ಜಾರಕಿಹೊಳಿ ಅವರು, ನಮ್ಮ ಬಣದ ಓರ್ವರಿಗೆ ಉಪಮುಖ್ಯಮಂತ್ರಿ ಸ್ಥಾನ, ಬಳ್ಳಾರಿ ಜಿಲ್ಲೆಗೆ ಒಬ್ಬ ಎಸ್.ಟಿ. ಸಮುದಾಯಕ್ಕೆ ಸೇರಿದ ಒಬ್ಬರಿಗೆ ಸಚಿವರನ್ನಾಗಿ ಮಾಡಬೇಕು, ಸಚಿವ ಡಿ.ಕೆ.ಶಿವಕುಮಾರ್ ಅವರನ್ನ ನಿಯಂತ್ರಿಸುವಂತೆ ಸೇರಿದಂತೆ ಮೂರು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ, ನಾವು ಹೇಳಿದ ಅಧಿಕಾರಿಗಳನ್ನೇ ವರ್ಗಾವಣೆ ಮಾಡಬೇಕು ಎಂದು ಜಾರಕಿ ಹೊಳಿ ಬ್ರದರ್ಸ್ ಡಿಮ್ಯಾಂಡ್ ಮಾಡಿದರು. ಸಚಿವ ಡಿ.ಕೆ.ಶಿವಕುಮಾರ್ ಅವರ ಪ್ರಭಾವ ಬಳಸಿ. ಬೆಳಗಾವಿ ಜಿಲ್ಲೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ತಮಗೆ ಬೇಕಾದ ಅಧಿಕಾರಿಗಳನ್ನು ನಿಯೋಜಿಸಿದ್ದಾರೆ ಇದರಿಂದ ಕ್ಷೇತ್ರದ ಅಭಿವೃದ್ದಿಗೆ ಅಡ್ಡಿಯಾಗುತ್ತದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ