ದೆಹಲಿಗೆ ಪ್ರತಿಭಟನೆಗೆ ತೆರಳುತ್ತಿದ್ದ ಕರ್ನಾಟಕದ 70 ರೈತರು ಭೋಪಾಲ್​ನಲ್ಲಿ ಪೊಲೀಸರ

ಹುಬ್ಬಳ್ಳಿ

    ದೆಹಲಿಯ ಕಿಸಾನ್ ಮೋರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಕರ್ನಾಟಕದ 70 ಮಂದಿ ರೈತರನ್ನು ಮಧ್ಯ ಪ್ರದೇಶದ ಭೋಪಾಲ್​ನಲ್ಲಿ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. ಧಾರವಾಡ ಜಿಲ್ಲೆಯ 16 ರೈತರು ಕೂಡ ಇದರಲ್ಲಿ ಸೇರಿದ್ದಾರೆ. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತರು ದೆಹಲಿಗೆ ತೆರಳುತ್ತಿದ್ದರು.

    ದೆಹಲಿಯ‌ ಜಂತರ್​ ಮಂತರ್​​ನಲ್ಲಿ ಮಂಗಳವಾರ ಕಿಸಾನ್ ಮೋರ್ಚಾ ವತಿಯಿಂದ ಕಾರ್ಯಕ್ರಮ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಭಾಗವಹಿಸುವುದಕ್ಕಾಗಿ ರಾಜ್ಯದ ರೈತರು ನಿಜಾಮುದ್ದೀನ್ ಎಕ್ಸಪ್ರೆಸ್ ರೈಲು ಮೂಲಕ ತೆರಳುತ್ತಿದ್ದರು.

    ಸದ್ಯ ವಶಕ್ಕೆ ಪಡೆಯಲಾಗಿರುವ ರೈತರನ್ನು ಕಲ್ಯಾಣ ಮಂಟಪವೊಂದರಲ್ಲಿ ಇರಿಸಿಕೊಳ್ಳಲಾಗಿದೆ. ಅಲ್ಲಿಯೇ ‘ರೈತ ವಿರೋಧಿ ಮಧ್ಯಪ್ರದೇಶ ಪೊಲೀಸರಿಗೆ ಧಿಕ್ಕಾರ’ ಎಂದು ಘೋಷಣೆ ಕೂಗಿ ರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧವೂ ಘೋಷಣೆಗಳನ್ನು ಕೂಗಿದ್ದಾರೆ.ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ರೈತರ ಪ್ರತಿಭಟನೆ ಹಮ್ಮಿಕೊಂಡಿದೆ.

    ಪ್ರತಿಭಟನೆಗೆ 200ಕ್ಕೂ ಹೆಚ್ಚು ಸಂಘಟನೆಗಳ ಸದಸ್ಯರುದೆಹಲಿಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ 200ಕ್ಕೂ ಹೆಚ್ಚು ಸಂಘಟನೆಗಳ ಸದಸ್ಯರು ಭಾಗವಹಿಸಲಿದ್ದಾರೆ ಎನ್ನಲಾಗಿದೆ. ರೈತರು ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ಪಿಂಚಣಿ ಮತ್ತು ವಿಮಾ ಯೋಜನೆಗಳಿಗೆ ಖಾತರಿ ನೀಡುವ ಕಾನೂನನ್ನು ರೂಪಿಸುವಂತೆ ಒತ್ತಾಯಿಸುತ್ತಿದ್ದಾರೆ.

    ಈ ಮಧ್ಯೆ ಮುನ್ನಚ್ಚರಿಕಾ ಕ್ರಮವಾಗಿ ಹರಿಯಾಣ ಸರ್ಕಾರ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸಂಪರ್ಕವನ್ನು ಸ್ಥಗಿತಗೊಳಿಸಲು ಆದೇಶಿಸಿದೆ. ಮಂಗಳವಾರ ರಾತ್ರಿಯವರೆಗೆ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

    ಏತನ್ಮಧ್ಯೆ, ದೆಹಲಿಗೆ ತೆರಳುವ ಮೊದಲು ರೈತರು ನೆರೆಯ ರಾಜ್ಯ ರೈತರು ಹರಿಯಾಣವನ್ನು ಪ್ರವೇಶಿಸದಂತೆ ಖಚಿತಪಡಿಸಿಕೊಳ್ಳಲು ಹರಿಯಾಣ-ಪಂಜಾಬ್ ಗಡಿಗಳನ್ನು ಮುಚ್ಚಲು ಪೊಲೀಸರು ಯೋಜಿಸಿದ್ದಾರೆ. ಈ ಕ್ರಮವು ಚಂಡೀಗಢ ಮತ್ತು ದೆಹಲಿ ನಡುವೆ ಪ್ರಯಾಣಿಸುವವರಿಗೆ ಅನಾನುಕೂಲತೆಯನ್ನು ಉಂಟುಮಾಡಲಿದೆ. ಈ ನಿಟ್ಟಿನಲ್ಲಿ ಪೊಲೀಸರು ಪರ್ಯಾಯ ಮಾರ್ಗಗಳನ್ನು ಉಲ್ಲೇಖಿಸಿ ಪ್ರಕಟಣೆ ಹೊರಡಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap