ನವದೆಹಲಿ:
ಇಡೀ ದೇಶದಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಗುರುವಾರ ದೇಶದ ಜನಕ್ಕೆ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ತಮ್ಮ ಅಧಿಕೃತ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿ ಪ್ರಧಾನಿ ಮೋದಿಯವರು ದೇಶದ ಜನರಿಗೆ ಶುಭಾಶಯವನ್ನು ಕೋರಿದ್ದಾರೆ.
“ದೇಶದ ಜನತೆಗೆ ಮಂಗಳಕರ ಗಣೇಶ ಚತುರ್ಥಿ ಹಬ್ಬ ದಿನದ ಶುಭಾಶಯಗಳು” ಎಂದು ಹೇಳಿದ್ದಾರೆ.