ದೈಹಿಕ,ಮಾನಸಿಕ ಬೆಳವಣಿಗೆಗೆ ಕ್ರೀಡೆಗಳು ಅಗತ್ಯ : ಶಾಸಕ ರೆಡ್ಡಿ

ಬಳ್ಳಾರಿ:

      ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಓದಿನೊಂದಿಗೆ ಕ್ರೀಡೆಗಳಲ್ಲಿಯೂ ಸಹ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಬಳ್ಳಾರಿ ನಗರ ಶಾಸಕರಾದ ಸೋಮಶೇಖರ ರೆಡ್ಡಿ ಅವರು ಹೇಳಿದರು.

      ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರೌಢಶಾಲೆಯ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

      ತಂಡಗಳನ್ನು ಪರಿಚಯಿಸಿದ ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು ಕೇವಲ ವಿದ್ಯಾಭ್ಯಾಸ ಅಲ್ಲದೇ ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಆರೋಗ್ಯವಂತರಾಗಿರಬಹುದು ಎಂದು ಹೇಳಿದ ಅವರು ಸೋಲು-ಗೆಲವು ಕ್ರೀಡೆಗಳಲ್ಲಿ ಸಾಮಾನ್ಯ. ಕ್ರೀಡಾಪಟುಗಳು ಸ್ಪೂರ್ತಿಯಿಂದ ಪಾಲ್ಗೊಂಡು ಜಿಲ್ಲಾಮಟ್ಟದಿಂದ ರಾಜ್ಯ,ರಾಷ್ಟ್ರ ಮತ್ತು ಅಂತರಾಷ್ಟ್ರೀಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಅವರು ಹೇಳಿದರು.

       ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನಿಂದ ಆಗಮಿಸಿದ ಕ್ರೀಡಾಪಟುಗಳ ತಂಡಗಳಿಗೆ ಶುಭಕೋರಿದರು. ದೈಹಿಕ ಶಿಕ್ಷಕರಾದ ರಾಮಾಂಜಿನೇಯ ಅವರು ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪೋಷಕರು ಪ್ರೋತ್ಸಾಹ ನೀಡಬೇಕು. ಪ್ರ್ರಾಮಾಣಿಕತೆ, ನಿಷ್ಠೆ ಹಾಗೂ ಶಿಸ್ತುನ್ನು ರೂಡಿಸಿಕೊಳ್ಳಬೇಕು ಎಂದರು.

       ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರಾದ ಶ್ರೀನಿವಾಸ ಮೋತ್ಕರ್, ಡಿಡಿಪಿಐ ಶ್ರೀಧರನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರೆಹಮತ್ ಹುಲ್ಲಾ, ಮುಖಂಡರಾದ ವೀರಶೇಖರೆಡ್ಡಿ, ನಿವೃತ್ತ ದೈಹಿಕ ಶಿಕ್ಷಕರು ಸೇರಿದಂತೆ ಇತರೆ ಗಣ್ಯವ್ಯಕ್ತಿಗಳು ತರಬೇತಿದಾರರು, ಜಿಲ್ಲೆಯ ಎಲ್ಲಾ ತಾಲೂಕಿನ ಕ್ರೀಡಾಪಟುಗಳು, ಸಾರ್ವಜನಿಕರು ಇದ್ದರು.
            
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link