ದ್ವೇಷದ ರಾಜಕಾರಣ ಮಾಡುವುದು ಒಳ್ಳೆಯದಲ್ಲ : ಅಶ್ವತ್ಥನಾರಾಯಣ

ಬೆಂಗಳೂರು

    ಜನ ಕಾಂಗ್ರೆಸ್ಸಿಗೆ ಅಧಿಕಾರ ಕೊಟ್ಟಿದ್ದಾರೆ. ಅದನ್ನು ತಿಳಿದು ಸಮಯ ಮತ್ತು ಶ್ರಮವನ್ನು ಜನಪರ ಕೆಲಸಗಳಿಗೆ ಬಳಸಬೇಕು. ಅದಕ್ಕೆ ಬದಲಾಗಿ ದ್ವೇಷದ ರಾಜಕಾರಣ ಮಾಡುವುದು ಒಳ್ಳೆಯದಲ್ಲ. ಎರಡೇ ವಾರದಲ್ಲಿ ಕಾಂಗ್ರೆಸಿಗೆ ಅಧಿಕಾರ‌ ನೆತ್ತಿಗೇರಿರುವುದನ್ನು ಇದು ತೋರಿಸುತ್ತದೆ ಎಂದು ಅಶ್ವತ್ಥನಾರಾಯಣ ಟೀಕಿಸಿದ್ದಾರೆ.

    ಕಳೆದ ಫೆಬ್ರವರಿಯಲ್ಲಿ ನೀಡಿದ ಹೇಳಿಕೆ ಸಂಬಂಧ ನಾನು ಈಗಾಗಲೇ ಸದನದಲ್ಲೇ ಸ್ಪಷ್ಟನೆ ನೀಡಿದ್ದೇನೆ. ವಿಷಾದವನ್ನೂ ವ್ಯಕ್ತಪಡಿಸಿದ್ದೇನೆ ಎಂದು ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

    ಆದರೆ, ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದ್ದಂತೆ ನಾಲ್ಕು ತಿಂಗಳ ಹಿಂದಿನ ಹೇಳಿಕೆಯನ್ನು ನೆಪವಾಗಿಸಿಕೊಂಡು ಎಫ್‌ಐಆರ್‌ ದಾಖಲಾಗುವಂತೆ ಮಾಡಿದೆ. ವೈಯಕ್ತಿಕವಾಗಿ ಸಿದ್ದರಾಮಯ್ಯ ಅವರ ಮೇಲೆ ದ್ವೇಷವಿಲ್ಲ. ಅವರ ಬಗ್ಗೆ ಗೌರವವಿದೆ. ಸೈದ್ಧಾಂತಿಕವಾಗಿ ವ್ಯತ್ಯಾಸಗಳಿವೆ. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಚುನಾವಣಾ ಪ್ರಚಾರದ ವೇಳೆ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದರು.

     ನನಗೇನೂ ಸಿದ್ದರಾಮಯ್ಯ ಅವರ ಬಗ್ಗೆ ವೈಯಕ್ತಿಕವಾಗಿ ದ್ವೇಷವಿಲ್ಲ. ಅವರ ಬಗ್ಗೆ ಗೌರವವಿದೆ. ಆದರೆ, ಸೈದ್ಧಾಂತಿಕವಾಗಿ ನಮ್ಮ ಹಾಗೂ ಅವರ ಪಕ್ಷಗಳ ನಡುವೆ ವ್ಯತ್ಯಾಸಗಳಿವೆ. ಈ ಹಿನ್ನೆಲೆಯಲ್ಲಿ ನಾನು ಮಂಡ್ಯದಲ್ಲಿ ಚುನಾವಣಾ ಪ್ರಚಾರದ ವೇಳೆ ಹೇಳಿಕೆ ನೀಡಿದ್ದನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ. ನನ್ನ ಉದ್ದೇಶ ಅದಾಗಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

 

      ಇಷ್ಟಕ್ಕೂ ಹಿರಿಯ ಪೋಲಿಸ್ ಅಧಿಕಾರಿಗಳ ಸಭೆಯಲ್ಲಿ, ನನ್ನ ಹೇಳಿಕೆ ವಿರುದ್ಧ ದೂರು ಏಕೆ ದಾಖಲಿಸಲಿಲ್ಲ ಎಂದು ಡಿಸಿಎಂ ಧಮ್ಕಿ ಹಾಕಿದ ಮೇಲೆ ದೂರು ದಾಖಲಿಸಿರುವುದು ಕೂಡ‌ ಇದೆಲ್ಲವೂ ರಾಜಕೀಯ ಪ್ರೇರಿತ ಎನ್ನುವುದನ್ನು ತೋರಿಸುತ್ತದೆ ಎಂದರು.

Recent Articles

spot_img

Related Stories

Share via
Copy link
Powered by Social Snap