ಧಾರವಾಡ
ಬಿಜೆಪಿ ಧಾರವಾಡ ಜಿಲ್ಲಾ ಯವ ಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬಾತನನ್ನು ಏಪ್ರಿಲ್ 18 ಮಂಗಳವಾರ ಕೆಲ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಮಂಗಳವಾರ ತಡರಾತ್ರಿ ಕೆಲವು ಕಾರಣಗಳಿಗೆ ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ. ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆ ನಡೆಯುತ್ತಿದ್ದಂತೆ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಪ್ರವೀಣ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.ಘಟನೆ ಸಂಬಂಧ ದೂರು ದಾಖಲಿಸಿಕೊಂಡಿರುವ ಗರಗ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.