ಬೆಂಗಳೂರು:
ನಗರದಲ್ಲಿ ಒಂದು ಸಣ್ಣ ಫ್ಲೆಕ್ಸ್ ಕಣ್ಣಿಗೆ ಕಂಡರೂ ಅದರ ಹೊಣೆಯನ್ನು ನಗರ ಪೊಲೀಸ್ ಆಯುಕ್ತರೇ ಹೊರಬೇಕಾಗಿದೆ ಎಂದು ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸುವಂತೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಮೂರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಪೀಠ, ಬಿಬಿಎಂಪಿಗೆ ಅಕ್ರಮ ಜಾಹೀರಾತು, ಫ್ಲೆಕ್ಸ್ ಹಾಗೂ ಬ್ಯಾನರ್ ಗಳನ್ನು ತೆರವುಗೊಳಿಸಲು ಆಗಸ್ಟ್.31ರವರೆಗೂ ಗಡುವು ನೀಡಿದೆ.