ಚಳ್ಳಕೆರೆ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಅಲ್ಪಮತಗಳಿಂದ ಜೆಡಿಎಸ್ ಪಕ್ಷ ಪರಾಭವಗೊಂಡಿದ್ದು, ಮತದಾರರ ತೀರ್ಪಿನಂತೆ ಎರಡನೇ ಸ್ಥಾನಕ್ಕೆ ಇಳಿದಿದೆ. ಪ್ರಸ್ತುತ ನಗರಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳಿಸಿ ಗೆಲುವು ಸಾಧಿಸುವ ಮೂಲಕ ವಿಧಾನಸಭಾ ಚುನಾವಣೆಯ ಸೋಲನ್ನು ಮರೆಯೋಣವೆಂದು ಜೆಡಿಎಸ್ ಪಕ್ಷದ ಯುವ ಮುಖಂಡ, ಪರಾಜಿತ ಅಭ್ಯರ್ಥಿ ಎಂ.ರವೀಶ್‍ಕುಮಾರ್ ತಿಳಿಸಿದರು.
ಅವರು, ಭಾನುವಾರ ನಗರದ 16ನೇ ವಾರ್ಡ್‍ನಲ್ಲಿ ಅಭ್ಯರ್ಥಿ ಎಂ.ನಾಗಮಣಿ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಮಾತನಾಡಿದರು. ನಗರಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಎಲ್ಲಾ ವಾರ್ಡ್‍ಗಳಲ್ಲಿ ನಾಳೆಯಿಂದ ಬಿರುಸಿನ ಪ್ರಚಾರ ನಡೆಸುವುದಾಗಿ ತಿಳಿಸಿದರು. ನಗರಸಭಾ ಚುನಾವಣೆಯಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮತದಾರರು ಹೆಚ್ಚು ಒತ್ತು ನೀಡುವುದು ಸ್ವಾಭಾವಿಕ, ಸದರಿ ವಾರ್ಡ್‍ನಲ್ಲಿ ಸ್ಪರ್ಧಿಸುವ ಅಭ್ಯರ್ಥಿ ವಾರ್ಡ್‍ನ ಅಭಿವೃದ್ಧಿಯ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದ್ಧಾರೆ. ಅವರಿಗೆ ಪಕ್ಷದ ವತಿಯಿಂದ ಟಿಕೆಟ್ ನೀಡಲಾಗಿದೆ. 16ನೇ ವಾರ್ಡ್‍ನ ಎಲ್ಲಾ ಮತದಾರರು ಜೆಡಿಎಸ್ ಅಭ್ಯರ್ಥಿಯನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡುವಂತೆ ಮನವಿ ಮಾಡಿದರು.
ತಾಲ್ಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿ, ಈ ಬಾರಿಯ ನಗರಸಭಾ ಚುನಾವಣೆಯಲ್ಲಿ ಎಲ್ಲಾ ವಾರ್ಡ್‍ಗಳಲ್ಲಿ ಅಭ್ಯರ್ಥಿಗಳು ಕಾಂಗ್ರೆಸ್ ಪಕ್ಷಕ್ಕೆ ಬಾರೀ ಪೈಪೋಟಿ ನೀಡಿದ್ದಾರೆ. ಬಿಜೆಪಿಗೂ ಸಹ ನಮ್ಮ ಪಕ್ಷ ಪೈಪೋಟಿ ನಡೆಸಿದೆ. ಕಳೆದ ಬಾರಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಆಡಳಿತ ನಡೆಸಿದ್ದು, ಈ ಬಾರಿ ಸ್ವಾತಂತ್ರ್ಯವಾಗಿ ಆಡಳಿತ ನಡೆಸಲು ಪಕ್ಷ ಯೋಜಿಸಿದೆ ಎಂದರು.
ಪ್ರಚಾರ ಕಾರ್ಯದಲ್ಲಿ ಅಭ್ಯರ್ಥಿ ಎಂ.ನಾಗಮಣಿ, ಚನ್ನಿಗರಾಯಪ್ಪ, ಬಾಬು, ಭೀಮಣ್ಣ, ರಮೇಶ್, ರಾಘವೇಂದ್ರನಾಯಕ ಮುಂತಾದವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ