ನಗರಸಭೆ ಚುನಾವಣೆಯಲ್ಲಿ ಶಾಂತಿ ಕದಡಿದರೆ ಕಠಿಣ ಕಾನೂನು ಕ್ರಮ : ಜಿಲ್ಲಾ ರಕ್ಷಣಾಧಿಕಾರಿ ಶ್ರೀನಾಥ ಎಂ.ಜೋಶಿ

ಚಳ್ಳಕೆರೆ

           ನಗರಸಭೆಯ ಚುನಾವಣೆಯ ಮತದಾನದ ಸಂದರ್ಭದಲ್ಲಿ ಶಾಂತಿ ಕಾಪಾಡಲು ಸಾರ್ವಜನಿಕರು ಹಾಗೂ ರಾಜಕೀಯ ವ್ಯಕ್ತಿಗಳು ಸಹಕಾರ ನೀಡಬೇಕಿದ್ದು, ಮತದಾನ ಸಂದರ್ಭದಲ್ಲಿ ಅನಗತ್ಯ ಸಮಸ್ಯೆಗಳನ್ನು ಉಂಟು ಮಾಡುವ ವ್ಯಕ್ತಿಗಳ ವಿರುದ್ದ ನಿದಾಕ್ಷಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ಜಿಲ್ಲಾ ರಕ್ಷಣಾಧಿಕಾರಿ ಶ್ರೀನಾಥ ಎಂ.ಜೋಶಿ ನೀಡಿದ್ದಾರೆ.

           ಬುಧವಾರ ಇಲ್ಲಿನ ತಾಲ್ಲೂಕು ಕಚೇರಿಯಲ್ಲಿರುವ ಭದ್ರತಾ ಕೊಠಡಿ ಪರಿಶೀಲನೆಗೆ ಆಗಮಿಸಿದ್ದು, ನಂತರ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಎರಡು ನಗರಸಭೆ, ಒಂದು ಪುರಸಭೆಗೆ ಚುನಾವಣೆ ನಡೆಯಲಿದ್ದು, ಪೊಲೀಸ್ ಇಲಾಖೆ ಚುನಾವಣೆಗೆ ಸಂಬಂಧಪಟ್ಟಂತೆ ಹಲವಾರು ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದೆ. ಶಾಂತಿಯುತ ಮತದಾನಕ್ಕೆ ಎಲ್ಲರೂ ಅವಕಾಶ ನೀಡಬೇಕಿದೆ. ಆದರೆ, ಅನಗತ್ಯವಾಗಿ ಕಾನೂನನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗಳಾಗಲಿ ಸಂಸ್ಥೆಗಳಾಗಲಿ ಅಂತಹವುಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಇಲಾಖೆ ಹಿಂಜರಿಯುವುದಿಲ್ಲ. ಪ್ರತಿಯೊಬ್ಬರೂ ಸಹ ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಹಾಗೂ ಪೊಲೀಸ್ ಇಲಾಖೆಗೆ ಸಹಕಾರ ನೀಡುವಂತೆ ಮನವಿ ಮಾಡಿದ್ಧಾರೆ.

              ನಗರಸಭೆ ಚುನಾವಣೆಗೆ ಬಾರೀ ಬಂದೋಸ್ತ್ :- ಈ ತಿಂಗಳ 31 ರಂದು ನಡೆಯುವ ನಗರಸಭೆ ಚುನಾವಣೆಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಿದ್ದು ಪ್ರತಿಯೊಂದು ಹಂತದಲ್ಲೂ ಸಹ ಕಟ್ಟುನಿಟ್ಟಿನ ಪರಿಶೀಲನೆ ನಡೆಸಲಾಗುವುದು. ಯಾವುದೇ ವ್ಯಕ್ತಿ ಅಪಾಯಕರ ಆಯುದಗಳನ್ನು ಹಿಡಿದು ಓಡಾಡಿದಲ್ಲಿ ಅಂತಹವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಡಿವೈಎಸ್ಪಿ ಎಸ್.ರೋಷನ್ ಜಮೀರ್ ನೀಡಿದ್ಧಾರೆ.

               ವೃತ್ತ ನಿರೀಕ್ಷ ಎನ್.ತಿಮ್ಮಣ್ಣ ಮಾಹಿತಿ ನೀಡಿ, ಚುನಾವಣಾ ಕಾರ್ಯಕ್ಕಾಗಿ ಜಿಲ್ಲಾ ರಕ್ಷಣಾಧಿಕಾರಿಗಳು, ಹೆಚ್ಚುವರಿ ರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸ್ ಬಂದೋ¨ಸ್ತ್ ಏರ್ಪಡಿಸಿದ್ದು, ಓರ್ವ ಡಿವೈಎಸ್ಪಿ, ಇಬ್ಬರು ವೃತ್ತ ನಿರೀಕ್ಷಕರು, 6 ಪಿಎಸ್‍ಐಗಳು, 19 ಎಎಸ್‍ಐ, 105 ಹೆಚ್‍ಸಿ ಮತ್ತು ಪೇದೆಗಳು, ಎರಡು ಡಿಎಆರ್ ವ್ಯಾನ್, ಒಂದು ಕೆಎಸ್‍ಆರ್‍ಪಿ ಚುನಾವಣಾ ಕಾರ್ಯಕ್ಕಾಗಿ ನೇಮಿಸಲಾಗಿದೆ.
                 ನಗರದ ಪ್ರತಿಯೊಂದು ಮತಗಟ್ಟೆ ಕೇಂದ್ರಕ್ಕೂ ಪೊಲೀಸ್ ಸಿಬ್ಬಂದಿ ಹಾಗೂ ಗೃಹ ರಕ್ಷಕ ದಳವನ್ನು ನೇಮಿಸಿದ್ದು ಪಿಎಸ್‍ಐ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಪ್ರತಿ ಮತಗಟ್ಟೆ ಕೇಂದ್ರದ ಮುಂದೆ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಸಾರ್ವಜನಿಕರು ಹಾಗೂ ವಿವಿಧ ಪಕ್ಷಗಳ ರಾಜಕೀಯ ಮುಖಂಡರು ಶಾಂತಿಯುತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸುವಂತೆ ಅವರು ಮನವಿ ಮಾಡಿದ್ದಾರೆ.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap