ನಗರಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಿ ಅಧಿಕಾರ ಪಡೆಯಲು ಶಾಸಕರ ಮನವಿ

ಚಳ್ಳಕೆರೆ-

ನಗರಸಭಾ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನಗಳನ್ನು ತಂದುಕೊಡುವ ನಿಟ್ಟಿನಲ್ಲಿ ಎಲ್ಲಾ ಅಭ್ಯರ್ಥಿಗಳು ತಮ್ಮ ತಮ್ಮ ವಾರ್ಡ್‍ಗಳಲ್ಲಿ ಹೆಚ್ಚು ಪ್ರಚಾರ ನಡೆಸಿ ಗೆಲುವು ಸಾಧಿಸುವ ಮೂಲಕ ಹೆಚ್ಚು ಸ್ಥಾನಗಳನ್ನು ಗಳಿಸಿ ನಗರಸಭೆಯ ಆಡಳಿತದ ಚುಕ್ಕಾಣಿಯನ್ನು ತಪ್ಪದೆ ಪಡೆಯುವಂತೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅಭ್ಯರ್ಥಿಗಳಿಗೆ ಮನವಿ ಮಾಡಿದ್ಧಾರೆ.

ಬುಧವಾರ ಇಲ್ಲಿನ ಡಿ.ವೀರಣ್ಣ ಲೇಔಟ್‍ನಲ್ಲಿನ ಶಾಸಕರ ನಿವಾಸದ ಸಭಾಂಗಣದಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ಪಕ್ಷದ ಅಭ್ಯರ್ಥಿಗಳ ಸಭೆಯಲ್ಲಿ ಭಾಗವಹಿಸಿ, ಗೆಲುವು ಸಾಧಿಸುವ ನಿಟ್ಟಿನಲ್ಲಿ ಅನುಸರಿಸಬೇಕಾದ ಹಲವಾರು ಕ್ರಮಗಳ ಬಗ್ಗೆ ಶಾಸಕರು ಚರ್ಚೆ ನಡೆಸಿದರು. ಈಗಾಗಲೇ ಕಳೆದ ನಗರಸಭಾ ಅವಧಿಯಲ್ಲಿ ಕಾರ್ಯನಿರ್ವಹಿಸಿದ ಕೆಲವು ನಗರಸಭಾ ಸದಸ್ಯರು ಮತ್ತೊಮ್ಮೆ ಸ್ಪರ್ಧೆಗೆ ಇಳಿದಿದ್ದಾರೆ. ಪಕ್ಷದ ವತಿಯಿಂದ ವಿವಿಧ ವಾರ್ಡ್‍ಗಳಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಮುನ್ನ ಪಕ್ಷದ ಎಲ್ಲಾ ಮುಖಂಡರು ಸೇರಿ ಮುಕ್ತವಾಗಿ ಚರ್ಚಿಸಿ ಸಾಧ್ಯವಾದಷ್ಟು ಮಟ್ಟಿಗೆ ಎಲ್ಲಾ ಸಮುದಾಯಗಳಿಗೂ ಅವಕಾಶ ಮಾಡಿಕೊಡಲಾಗಿದೆ. ವಿಶೇಷವಾಗಿ ಸಾಮಾನ್ಯ ಸ್ಥಾನಗಳಲ್ಲಿ ಮೀಸಲಾತಿ ಅಭ್ಯರ್ಥಿಗಳು ಸ್ಪರ್ಧಿಸದಂತೆ ಜಾಗ್ರತೆ ವಹಿಸಲಾಗಿದೆ. ಎಲ್ಲಾ ಅಭ್ಯರ್ಥಿಗಳು ತಮ್ಮ ವಾರ್ಡ್‍ಗಳಲ್ಲಿ ಗೆಲುವನ್ನು ಸವಾಲಾಗಿ ಸ್ವೀಕರಿಸಿ ಕಾರ್ಯನಿರ್ವಹಿಸಬೇಕು. ಕ್ಷೇತ್ರದ ಶಾಸಕನಾಗಿ ನಾನು ಸಹ ಪ್ರತಿವಾರ್ಡ್‍ಗೂ ಪಕ್ಷದ ಹಲವಾರು ಮುಖಂಡರು ಹಾಗೂ ಜಿಲ್ಲಾಧ್ಯಕ್ಷರೊಂದಿಗೆ ಭೇಟಿ ನೀಡಿ ಪ್ರಚಾರ ಕಾರ್ಯನಡೆಸುವೆ ಎಂದರು.

ಪಕ್ಷಕ್ಕೆ ಸೇರ್ಪಡೆ :- ದಲಿತ ಸಮುದಾಯದ ಯುವ ಮುಖಂಡ ಪಿ.ವೆಂಕಟೇಶ್ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಶಾಸಕರ ಸಮಕ್ಷಮದಲ್ಲಿ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ ಟಿ.ಪ್ರಭುದೇವ್, ಎಸ್.ಎಚ್.ಸೈಯದ್, ಆರ್.ಪ್ರಸನ್ನಕುಮರ್, ಆರ್.ವೀರಭದ್ರಿ, ದೊಡ್ಡರಂಗಪ್ಪ, ವೆಂಕಟೇಶ್, ಅಭ್ಯರ್ಥಿಗಳಾದ ಎಂ.ರಾಮು, ಜಿ.ಮಾರಣ್ಣ, ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.

Recent Articles

spot_img

Related Stories

Share via
Copy link