ಬೆಂಗಳೂರು :
ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ನಜೀರ್ ಅಹ್ಮದ್ ಅವರನ್ನು ಸಚಿವ ಸ್ಥಾನಕ್ಕೆ ಪರಿಗಣಿಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋಲಾರ ಜಿಲ್ಲಾ ಮುಸ್ಲಿಂ ಯುನೈಟೆಡ್ ಫ್ರಂಟ್ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಲಾರ ಜಿಲ್ಲಾ ಮುಸ್ಲಿಂ ಯುನೈಟೆಡ್ ಫ್ರಂಟ್ ಅಧ್ಯಕ್ಷ ಅಬ್ದುಲ್ ಖಯೂಮ್, ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ಕಲ್ಪಿಸಲಿರುವ ಶೇ.4 ರಷ್ಟು ಮೀಸಲಾತಿ ಜಾರಿಗೆ ತರಲು ನಜೀರ್ ಅಹ್ಮದ್ ಸಮರ್ಥ ವ್ಯಕ್ತಿ. ಅಪಾರ ಸಾಮರ್ಥ್ಯ, ಪ್ರಾಮಾಣಿಕತೆ, ಬದ್ಧತೆ, ಸಮರ್ಪಣಾ ಮನೋಭಾವ ಅವರಲ್ಲಿದೆ ಎಂದರು.
“ಹಿಂದಿನ ಬಿಜೆಪಿ ಸರ್ಕಾರ ರದ್ದುಪಡಿಸಿದ ಮುಸ್ಲಿಂ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿಯನ್ನು ಮರು ಜಾರಿ ಮಾಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ನಜೀರ್ ಅಹ್ಮದ್ ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ ಮತ್ತು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಜೀವನದಲ್ಲಿದ್ದಾರೆ. ಮುಸ್ಲಿಂ ಸಮುದಾಯದ ಕ್ಷೇಮಾಭ್ಯುದಯಕ್ಕೆ ಸಂಬAಧಿಸಿದ ವಿಷಯಗಳಲ್ಲಿ ಅವರ ಜ್ಞಾನ ಮತ್ತು ಅನುಭವವು ಅಪಾರ. ನಜೀರ್ ಅಹ್ಮದ್ ಮುಸ್ಲಿಂ ಸಮುದಾಯದಲ್ಲಿ ಉತ್ತಮ ವಿಶ್ವಾಸಾರ್ಹ ಮತ್ತು ಸಮಗ್ರತೆಯ ವ್ಯಕ್ತಿ ಎಂದು ಹೇಳಿದರು.
ನಜೀರ್ ಅಹ್ಮದ್ ಮುಸ್ಲಿಂ ನಾಯಕರ ತಂಡದೊಂದಿಗೆ ರಾಜ್ಯದಾದ್ಯಂತ ಪ್ರವಾಸ ಮಾಡಿ, ಹಿಂದಿನ ಬಿಜೆಪಿ ಸರ್ಕಾರದ ಅಲ್ಪಸಂಖ್ಯಾತ ವಿರೋಧಿ ಧೋರಣೆಯನ್ನು ಸಮುದಾಯಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಇದರಿಂದಾಗಿ ಲಕ್ಷಾಂತರ ಮುಸ್ಲಿಮರು ಕಾಂಗ್ರೆಸ್‌ಗೆ ಈ ಬಾರಿ ಭಾರಿ ಬೆಂಬಲ ನೀಡಿದ್ದಾರೆ. “ನಜೀರ್ ಅಹ್ಮದ್ ಅವರು ಜನರಿಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಸಲ್ಲಿಸಿರುವ ಸೇವೆ ಪರಿಗಣಿಸಿ ಸೂಕ್ತ ಖಾತೆ ನೀಡಬೇಕು” ಎಂದು ಖಯೂಮ್ ಮನವಿ ಮಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
