ಬೆಂಗಳೂರು:
ನಟ, ರಾಜಕಾರಣಿ ರೆಬಲ್ ಸ್ಟಾರ್ ಅಂಬರೀಷ್(66) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಿಡ್ನಿ, ಶ್ವಾಸಕೋಶದ ಸಮಸ್ಯೆ ಹಾಗೂ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ ಅಂಬರೀಷ್ ಅವರನ್ನು ಇಂದು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಂಬರೀಷ್ ಕೊನೆಯುಸಿರೆಳೆದಿದ್ದಾರೆ . ಸಂಜೆ ಮನೆಯಲ್ಲಿ ಕುಸಿದು ಬಿದ್ದ ಅಂಬರೀಶ್ ರನ್ನು ಕುಟುಂಬದ ಸದಸ್ಯರು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗಾಗಲೇ ಉಸುರಾಟದ ಸಮಸ್ಯೆ ಮತ್ತು ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದ ಅಂಬರೀಶ್ ಅವರಿಗೆ ವಿಕ್ರಂ ಆಸ್ಪತ್ರೆಯ ಡಾ.ಸತೀಶ್ ಅವರ ತಂಡ ಚಿಕಿತ್ಸೆ ನೀಡಲು ಸತತ ಪ್ರಯತ್ನ ನಡೆಸಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಂಬರೀಶ್ ಹೃದಯಘಾತದಿಂದ ನಿಧನರಾಗಿದ್ದಾರೆ.
ಕಳೆದ ವರ್ಷವಷ್ಟೇ ಸಾವಿನೊಂದಿಗೆ ಹೋರಾಡಿ ಗೆದ್ದು ಬಂದಿದ್ದ ಅಂಬರೀಷ್ ಆರೋಗ್ಯದಲ್ಲಿ ಆಗಾಗ ಏರುಪೇರು ಆಗುತ್ತಿತ್ತು. ಇಂದು ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿದ್ದು ಡಾ. ಸತೀಶ್ ಮತ್ತು ತಂಡ ಅಂಬರೀಷ್ ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡುತ್ತಿದ್ದರು. ಆದರೆ ಈ ಬಾರಿ ವೈದ್ಯರು ಅವರನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ,ನಟ ಯಶ್, ಸಚಿವರಾದ ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ಮಂಡ್ಯದ ಸಂಸದ ಎಲ್. ಆರ್.ಶಿವರಾಮೇಗೌಡ, ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ಮುನಿರತ್ನ ಮತ್ತಿತರರು ಆಸ್ಪತ್ರೆಗೆ ಭೇಟಿ ನೀಡಿದ್ದರು.ನಗರ ಪೊಲೀಸ್ ಆಯುಕ್ತರಾದ ಸಿನೀಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
