ಬೆಳಗಾವಿ:
ಮೈಸೂರಿನಿಂದ ಲೋಕಸಭೆಗೆ ಸ್ಪರ್ಧಿಸುವಿರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಕಾಂಗ್ರೆಸ್‌ನಿಂದ ಸಂಸದನಾಗಿದ್ದೇನೆ. 40 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. ರಾಜಕೀಯ ಜೀವನದ ಅತಿ ಹೆಚ್ಚು ಕಾಲ ಕಾಂಗ್ರೆಸ್‌ನಲ್ಲಿದ್ದೆ. ಜೆಡಿಎಸ್ ಪಕ್ಷದ ಅಧ್ಯಕ್ಷನಾಗಿಯೂ ಕೆಲಸ ಮಾಡಿದ್ದೇನೆ. ನನ್ನ ಬಾವುಟ ಬದಲಾಗುತ್ತದೆ. ಆದರೆ, ಅಜೆಂಡಾ ಬದಲಾಗುವುದಿಲ್ಲ. ಯಾವುದೋ ಗಳಿಗೆಯಲ್ಲಿ ಕಾಂಗ್ರೆಸ್ ಬಿಟ್ಟಿದ್ದೆ. ಈಗ ಮತ್ತೊಮ್ಮೆ ಏಕೆ ಕಾಂಗ್ರೆಸ್‌ನಿಂದ ಸ್ಪರ್ಧಿಸಬಾರದು ಎಂದು ಪ್ರಶ್ನಿಸಿದರು.
ರಾಷ್ಟ್ರದಲ್ಲಿ ಹಾಗೂ ರಾಜ್ಯದಲ್ಲಿ ಈಗ ಪಕ್ಷ ರಾಜಕಾರಣಕ್ಕಿಂತ ವ್ಯಕ್ತಿ ರಾಜಕಾರಣ ನಡೆಯುತ್ತಿದೆ. ಸಿದ್ದರಾಮಯ್ಯ, ಯಡಿಯೂರಪ್ಪ, ಕುಮಾರಸ್ವಾಮಿ, ಎಚ್‌ಡಿ ದೇವೇಗೌಡ ಕೇಂದ್ರಿತ ರಾಜಕಾರಣ ನಡೆಯುತ್ತಿದೆ. ಇದರಿಂದ ರಾಜಕೀಯ ಪಕ್ಷಗಳಲ್ಲಿ ಆಂತರಿಕ ಪ್ರಜಾಪ್ರಭುತ್ವ ಸತ್ತುಹೋಗಿದೆ. ರಾಜಕಾರಣ ಜಡವಲ್ಲ ಅದು ಜಂಗಮ. ಏನೇನು ಬದಲಾಗುತ್ತದೆಯೋ ನೋಡೋಣ ಎಂದು ಹೇಳಿದರು.