ಬೆಂಗಳೂರು: 
ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ, ಅಸಮಾಧಾನ ಇಲ್ಲ. ಇದೆಲ್ಲ ಸತ್ಯಕ್ಕೆ ದೂರವಾದ ಸುದ್ದಿ. ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಸಮಸ್ಯೆಗಳೇ ಇಲ್ಲ ಎಂದಮೇಲೆ ಬಗೆಹರಿಸುವ ಮಾತೇಕೆ ಎಂದು ಪ್ರಶ್ನಿಸಿದ್ದಾರೆ.
ಕೆಲವರು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವುದು ಸತ್ಯ. ಆದರೆ ಯಾರೂ ಪಕ್ಷ ಬಿಡುವುದಿಲ್ಲ. ಸಮ್ಮಿಶ್ರ ಸರ್ಕಾರ ಐದು ವರ್ಷ ನಡೆಯುತ್ತದೆ. ಅದರಲ್ಲಿ ಯಾವುದೇ ಅನುಮಾನ ಇಲ್ಲ. ನಮ್ಮ ಪಕ್ಷದವರು ಶಿಸ್ತಿನ ಸಿಪಾಯಿಗಳು. ಪಕ್ಷದ ನಿಲುವಿಗೆ ಅವರೆಲ್ಲರೂ ಬದ್ಧರಾಗಿದ್ದಾರೆ ಎಂದು ತಿಳಿಸಿದರು.
ಬಿಜೆಪಿಯವರು ನಮ್ಮ ಶಾಸಕರಿಗೆ ಆಮಿಷವೊಡ್ಡಿದ್ದನ್ನು ಶಾಸಕರೇ ಹೇಳಿಕೊಂಡಿದ್ದಾರೆ. ಜಾರಕಿಹೊಳಿ ಸಹೋದರರು ಸೇರಿದಂತೆ ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








