ನರೇಂದ್ರ ಮೋದಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು – ಶಾಸಕ ಎಸ್.ವಿ.ರಾಮಚಂದ್ರ

ಜಗಳೂರು :

           ದೇಶದಲ್ಲಿ ಜನಸಾಮಾನ್ಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದು ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವ ಮೂಲಕ ಯುವ ಜನತೆಯ ಗಮನ ಸೆಳೆದಿರುವ ನರೇಂದ್ರ ಮೋದಿಯವರ ಆಡಳಿತ ಭವಿಷ್ಯದ ದಿನಗಳಲ್ಲಿ ಇನ್ನು ಬೇಕಾಗಿರುವುದರಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು ಎಂದು ಶಾಸಕ ಎಸ್.ವಿ.ರಾಮಚಂದ್ರ ಹೇಳಿದರು.

            ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಪ್ರಧಾನಮಂತ್ರಿ ನರೇಂದ್ರಮೋದಿಯವರ 68ನೇ ಹುಟ್ಟುಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಿಸಿ ಮಾತನಾಡಿದರು.ದೇಶದಲ್ಲಿ ನಾಲ್ಕುವರೆ ವರ್ಷ ಸುಭದ್ರ ಆಡಳಿತ ನೀಡುವ ಮೂಲಕ ವಿಶ್ವದಲ್ಲೇ ಹೆಸರಾಗಿರುವ ಪ್ರಧಾನಮಂತ್ರಿ ನರೇಂದ್ರಮೋದಿಯವರು ಮುಂದಿನ ಅವಧಿಗೂ ಸಹ ದೇಶವನ್ನು ಮುನ್ನಡೆಸುವಂತಾಗಲಿ. ಟೀ ಮಾರುವ ಒಬ್ಬ ಸಾಮಾನ್ಯ ವ್ಯಕ್ತಿ ಇಂದು ದೇಶದ ಅತ್ಯುನ್ನತ ಹುದ್ದೆ ಅಲಂಕರಿಸುವುದಕ್ಕೆ ಅವರ ಜೀವನದ ಹೋರಾಟ ದೇಶ ಕಟ್ಟುವ ಛಲವೇ ಇಂದು ಅವರನ್ನು ಈ ಮಟ್ಟಕ್ಕೆ ಬೆಳೆಸಿದೆ. ಕಾರ್ಯಕರ್ತರು ಸಹ ನರೇಂದ್ರ ಮೋದಿಯವರನ್ನು ಆದರ್ಶವಾಗಿಟ್ಟುಕೊಂಡು ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದರು.

            ಜಿಲ್ಲಾ ಪಂಚಾಯ್ತಿ ಸದಸ್ಯ ಎಸ್.ಕೆ.ಮಂಜುನಾಥ್ ಮಾತನಾಡಿ ಕೇಂದ್ರದಲ್ಲಿ ನಮ್ಮದೇ ಸರ್ಕಾರ ಆಡಳಿತದಲ್ಲಿದ್ದು, ರಾಜ್ಯದ ಅಭಿವೃದ್ದಿಗೆ ಸಾಕಷ್ಟು ಅನುದಾನಗಳನ್ನು ನೀಡಿದೆ. ನರೇಂದ್ರ ಮೋದಿಯವರ ಜನಪರ ಯೋಜನೆಗಳನ್ನು ತಿಳಿಸುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮಿಸಬೇಕು. ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕ ಎಸ್.ವಿ.ರಾಮಚಂದ್ರ ಅವರ ಸಹಕಾರದೊಂದಿಗೆ ಪಟ್ಟಣ ಪಂಚಾಯ್ತಿ ಆಡಳಿತ ಬಿಜೆಪಿಗೆ ಲಭಿಸಿದ್ದು ಉತ್ತಮ ಆಡಳಿತ ನೀಡುವ ಮೂಲಕ ಮಾದರಿ ಪಟ್ಟಣ ನಿರ್ಮಾಣಕ್ಕೆ ನಾವೆಲ್ಲರೂ ಶ್ರಮಿಸೋಣ ಎಂದರು.

             ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯೆ ಶಾಂತಕುಮಾರಿ, ಬಿಜೆಪಿ ತಾಲೂಕು ಅಧ್ಯಕ್ಷ ಡಿ.ವಿ.ನಾಗಪ್ಪ, ಪಟ್ಟಣ ಪಂಚಾಯ್ತಿ ಸದಸ್ಯರಾದ ಆರ್. ತಿಪ್ಪೇಸ್ವಾಮಿ, ದೇವರಾಜ್, ಸಿದ್ದಪ್ಪ, ಪಾಪಲಿಂಗಪ್ಪ, ಯುವ ಘಟಕದ ಅಧ್ಯಕ್ಷ ರವಿಕುಮಾರ್, ಬಿಸ್ತುವಳ್ಳಿ ಬಾಬು, ಗೌರಿಪುರ ಶಿವಣ್ಣ, ಕಸ್ತೂರಿಪುರ ಶಿವಮೂರ್ತಿ, ಕ್ಯಾಂಪ್‍ರಮೇಶ್, ಹನುಮಂತಪ್ಪ, ಸಿದ್ದಪ್ಪ, ರಂಗಪ್ಪ, ಸ್ಲಂ ಮೋರ್ಚದ ಅಧ್ಯಕ್ಷ ಓಬಳೇಶ್, ಮಹೇಶ್, ಶಾಮಣ್ಣ, ವೈದ್ಯಾಧಿಕಾರಿ ಮುರುಳಿಧರ್ ಸೇರಿದಂತೆ ಸಿಬ್ಬಂಧಿಗಳು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link