ಬೆಂಗಳೂರು:
ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ ಎಂದು ಯಲ್ಲಾಪುರ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಸ್ಪಷ್ಟ ಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡುತ್ತಿದ್ದ ಅವರು, ನಾನು ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ, ಹಾಗಾಗಿ ಈ ಬಾರಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದೇನೆಯೇ ಹೊರತು, ಬಿಜೆಪಿ ಪಕ್ಷದ ಸಚಿವ ಆಕಾಂಕ್ಷಿ ನಾನಲ್ಲ ಎಂದು ತಿಳಿಸಿದ್ದಾರೆ.
ಹಲವು ದಿನಗಳಿಂದ ಶಿವರಾಮ ಹೆಬ್ಬಾರ್ ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರುತ್ತಾರೆ ಎಂಬ ಸುದ್ದಿಯು ಹರಿದಾಡುತ್ತಿತ್ತು. ಇದಕ್ಕೆ ಹೆಬ್ಬಾರರು ಸ್ಪಷ್ಟನೆ ನೀಡಿದ್ದು, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಕ್ಷಣದವರೆಗೆ ರಾಜೀನಾಮೆ ಕೊಡುವ ಬಗ್ಗೆ ನಿರ್ಣಯವಾಗಿಲ್ಲ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ