ತುಮಕೂರು
ತುಮಕೂರು ನಗರದ ಹೊರವಲಯದ ಸಿದ್ಧಾರ್ಥನಗರದ ಬಳಿ ರಾಷ್ಟ್ರೀಯ ಹೆದ್ದಾರಿ-206 ರಲ್ಲಿ ಬೆಂಗಳೂರಿನ ಕಡೆಗೆ ಬರುತ್ತಿದ್ದ ಕಾರಿಗೆ ಅಡ್ಡವಾಗಿ ನಾಯಿ ಬಂದ ಕಾರಣ, ಕಾರಿನ ಚಾಲಕ ದಿಢೀರನೆ ಬ್ರೇಕ್ ಹಾಕಿದ್ದರಿಂದ ಸದರಿ ಕಾರು ನಿಯಂತ್ರಣ ತಪ್ಪಿ ರಸ್ತೆಯ ಬಲಬದಿಯ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರು ಅದೃಷ್ಟವಶಾತ್ ಪಾರಾಗಿದ್ದಾರೆ. ಈ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 279 ರ ಪ್ರಕಾರ ಮೊಕದ್ದಮೆ ದಾಖಲಾಗಿದೆ.







