ದಾವಣಗೆರೆ:
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಬೆಳ್ಳೊಡಿ ಶಾಖಾಮಠದಲ್ಲಿ ನಾಳೆ(ಗುರುವಾರ) ಸಂಜೆ ಕಾರ್ತಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಕನಕಗುರುಪೀಠ ಬೆಳ್ಳೊಡಿ ಶಾಖಾಮಠದ ಜಗದ್ಗುರುಗಳಾದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಯವರು ತಿಳಿಸಿದ್ದಾರೆ.
ಸಮಾಜದ ಬಂಧುಗಳು ಈ ಪವಿತ್ರ ಮಂಗಲ ಕಾರ್ಯಕ್ರಮ ದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಮತ್ತು ಶ್ರೀಗುರು ಕನಕದಾಸರ ಕೃಪೆಗೆ ಪಾತ್ರರಾಗಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಡಬೇಕಾಗಿ ಶ್ರೀಮಠ ಕೋರುತ್ತದೆ ಎಂದು ಅವರು ತಿಳಿಸಿದ್ದಾರೆ.