ಬೆಂಗಳೂರು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಅಧಿಕಾರಿಗಳ ಬೇಜವಾಬ್ದಾರಿಗೆ ಆಕ್ರೋಶ ವ್ಯಕ್ತಪಡಿಸಿದೆ.
‘ರಸ್ತೆಯಲ್ಲಿನ ತೆರೆದ ಗುಂಡಿಗಳಿಂದ ಜನರು ಸಾವು ನೋವುಗಳಿಗೆ ಈಡಾಗುತ್ತಿದ್ದಾರೆ’ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು (ಬುಧವಾರ) ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಎಸ್. ಜಿ. ಪಂಡಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಎಲ್ಲ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚುವಂತೆ ಸೂಚಿಸಿದೆ.
‘ಇಂದೇ (ಬುಧವಾರ) ಮೇಷರ್‌ಮೆಂಟ್ ಪುಸ್ತಕ ಸಲ್ಲಿಸಬೇಕು. ಈ ವಿಷಯವನ್ನು ನ್ಯಾಯಾಲಯ ಗಂಭಿರವಾಗಿ ಪರಿಗಣಿಸಿದೆ. ರಸ್ತೆ ಗುಂಡಿಗಳಿಂದ ಜನ ತೊಂದರೆ ಅನುಭವಿಸುತ್ತಿದ್ದಾರೆ. ನಿಮ್ಮ ಅಧಿಕಾರಿಗಳಿಗೆ ನಾಚಿಕೆ ಆಗುವುದಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.
ನೀವು ಏನು ಹಾಗೂ ಹೇಗೆ ಮಾಡುತ್ತೀರೋ ನಮಗೆ ಗೊತ್ತಿಲ್ಲ. ‘ನಾಳೆಯೊಳಗಾಗಿ ಬೆಂಗಳೂರು ನಗರದ 198 ವಾರ್ಡ್ ಗಳ ರಸ್ತೆಗಳು ಗುಂಡಿ ಮುಕ್ತವಾಗಬೇಕು. ಅಹೋರಾತ್ರಿ ಕೆಲಸ ಮಾಡಬೇಕು. ಎಂದು ತಾಕೀತು ಮಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ