ನಾವು ಎಂದಿಗೂ ಏಕಾಂಗಿಯಾಗಿಯೇ ಸ್ಪರ್ಧಿಸುತ್ತೇವೆ : ಮಾಯಾವತಿ

ನವದೆಹಲಿ:

     2024ರ ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಬುಧವಾರ ಘೋಷಿಸಿದ್ದಾರೆ.

    ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಅಥವಾ ಹೊಸದಾಗಿ ರೂಪುಗೊಂಡ ವಿರೋಧ ಪಕ್ಷದ ಒಕ್ಕೂಟ ‘ಇಂಡಿಯಾ’ದೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲದಿದ್ದರೆ, ಪಂಜಾಬ್ ಮತ್ತು ಹರಿಯಾಣದಲ್ಲಿ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಬಿಎಸ್‌ಪಿ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

    ಎನ್‌ಡಿಎ ಮತ್ತು ಹೊಸದಾಗಿ ರಚನೆಯಾದ ಪ್ರತಿಪಕ್ಷಗಳ ಒಕ್ಕೂಟ INDIA ಅನ್ನು ಟೀಕಿಸಿದರು. ಇವೆರಡೂ ದಲಿತರು ಮತ್ತು ದಮನಿತ ವರ್ಗಗಳ ಪರವಾಗಿ ಕೆಲಸ ಮಾಡಿಲ್ಲ. ಕಾಂಗ್ರೆಸ್ ಅಥವಾ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ತಾವು ನೀಡಿದ್ದ ಭರವಸೆಗಳನ್ನು ಮರೆಯುತ್ತಾರೆ ಎಂದು ಆರೋಪಿಸಿದರು.

     ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟವು ತಮ್ಮನ್ನು ತಾವು ಬಲಪಡಿಸಿಕೊಳ್ಳುತ್ತಿವೆ. ಹೀಗಿರುವಾಗ, ಬಿಎಸ್‌ಪಿ ದೇಶದಾದ್ಯಂತ ಗೌಪ್ಯವಾಗಿ ಪಕ್ಷದ ಕಾರ್ಯಕರ್ತರ ಸಭೆಗಳನ್ನು ನಡೆಸುತ್ತಿದೆ ಎಂದು ಮಾಯಾವತಿ ಹೇಳಿದರು.

    ‘ಕಾಂಗ್ರೆಸ್ ಜಾತಿವಾದಿ ಮನಸ್ಥಿತಿಯನ್ನು ಅಳವಡಿಸಿಕೊಂಡಿರುವುದರಿಂದ ಮತ್ತು ಅವರ ಬೇಡಿಕೆಗಳನ್ನು ಕಡೆಗಣಿಸಿರುವುದರಿಂದ ತುಳಿತಕ್ಕೊಳಗಾದ ವರ್ಗಗಳು ಬಿಎಸ್‌ಪಿಯನ್ನು ಬೆಂಬಲಿಸಬೇಕಾಗಿದೆ. ಕಾಂಗ್ರೆಸ್ ತನ್ನ ಜಾತಿವಾದಿ ಮತ್ತು ಬಂಡವಾಳಶಾಹಿ ಮನಸ್ಥಿತಿಯನ್ನು ಬದಿಗಿಟ್ಟು, ಬಡವರು ಮತ್ತು ಶೋಷಿತರ ಕಲ್ಯಾಣಕ್ಕಾಗಿ ಕೆಲಸ ಮಾಡಿದ್ದರೆ, ಬಿಆರ್ ಅಂಬೇಡ್ಕರ್ ಅವರ ಮಾತನ್ನು ಆಲಿಸಿದ್ದರೆ, ಬಿಎಸ್‌ಪಿ ರಚಿಸುವ ಅಗತ್ಯವೇ ಉದ್ಭವಿಸುತ್ತಿರಲಿಲ್ಲ’ ಎಂದು ಹೇಳಿದರು.

    ಬೆಂಗಳೂರಿನಲ್ಲಿ ಮಂಗಳವಾರ ಸಭೆ ಸೇರಿದ್ದ ಪ್ರತಿಪಕ್ಷಗಳು ತಮ್ಮ ಒಕ್ಕೂಟಕ್ಕೆ ‘ಭಾರತೀಯ ರಾಷ್ಟ್ರೀಯ ಅಭಿವೃದ್ಧಿಶೀಲ ಎಲ್ಲರನ್ನೂ ಒಳಗೊಳ್ಳುವ ಮೈತ್ರಿಕೂಟ (INDIA)’ ಎಂದು ಹೆಸರಿಟ್ಟಿದ್ದು, ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎಗೆ ಸವಾಲು ಹಾಕಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap