ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ : ವಿಜಯೇಂದ್ರ

ಬಳ್ಳಾರಿ: 

   ವಾಲ್ಮೀಕಿ ನಿಗಮದಲ್ಲಿನ ಹಗರಣದ ಬಗ್ಗೆ ಪ್ರಶ್ನೆ ಮಾಡಿದರೆ, ಬಿಜೆಪಿ ಅವಧಿಯ ಹಗರಣಗಳನ್ನು ತನಿಖೆ ಮಾಡುವುದಾಗಿ ಸಿದ್ದರಾಮಯ್ಯ ಹೇಳುತ್ತಾರೆ. ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ಲೂಟಿ ಮಾಡಿದ ಮುಖ್ಯಮಂತ್ರಿಗಳ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

   ಸಂಡೂರಿನಲ್ಲಿ ನಡೆದ ವಿಶೇಷ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಚುನಾವಣೆಯಲ್ಲಿ ಹೆಂಡ ಖರೀದಿಗೆ ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯವೇ ಹೇಳಿದೆ. ಆರಂಭದಲ್ಲಿ ಹಗರಣಕ್ಕೂ ಸರ್ಕಾರಕ್ಕೂ ಸಂಬಂಧವೇ ಇಲ್ಲ ಎಂದರು. ಆದರೆ, ವಿಧಾನಮಂಡಲದಲ್ಲಿ ನಿಲುವಳಿ ಸೂಚನೆ ಮಂಡಿಸಿದಾಗ ಹಗರಣ ಆಗಿದೆ ಎಂದು ಒಪ್ಪಿಕೊಂಡರು. ಅಧಿಕಾರಿಗಳು ಹಗರಣ ಮಾಡಿದ್ದಾರೆ ಎಂದರು. ಅಧಿಕಾರಿಗಳೇ ಮಾಡಿದ್ದರೂ ಒಂದೋ ಮುಖ್ಯಮಂತ್ರಿ ಒಪ್ಪಿಗೆ ಕೊಟ್ಟಿರಬೇಕು, ಇಲ್ಲವೇ ಅವರ ಬೇಜವಾಬ್ದಾರಿತನದಿಂದ ಹಗರಣ ಆಗಿರಬೇಕು. ಏನೇ ಆಗಿರಲಿ, ಮುಖ್ಯಮಂತ್ರಿ ಸಿದ್ದರಾಯ್ಯ ರಾಜೀನಾಮೆ ನೀಡಲೇಬೇಕು. ಇದರಿಂದ ತಪ್ಪಿಸಿಕೊಳ್ಳಲಾಗದು‘ ಎಂದು ಅವರು ವಾಗ್ದಾಳಿ ನಡೆಸಿದರು.

    ವಾಲ್ಮೀಕಿ ನಿಗಮದ ಹಗರಣ ಕುರಿತು ಎರಡು ತಿಂಗಳಿಂದ ಹೊರಾಟ ನಡೆಯುತ್ತಿದೆ. ಆದರೆ ಅಹಿಂದ ಹೆಸರು ಹೇಳಿಕೊಂಡು ಸಿಎಂ ಆಗಿರುವ ಸಿದ್ದರಾಮಯ್ಯ ನಿನ್ನೆ ರಣಕಹಳೆ ಊದಿದ್ದಾರೆ. ಬಿಜೆಪಿ ಬೆದರಿಕೆಗೆ ಹೆದರುವುದಿಲ್ಲ ಎಂದಿದ್ದಾರೆ. ಬಿಜೆಪಿ ಮೇಲೆ ಗದಾಪ್ರಹಾರ ಮಾಡಿ ಧಮಕಿ ಹಾಕುವ ಕೆಲಸ ಮಾಡಿದ್ದಾರೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಬೀದಿಗೆ ತರುವೆ ಎಂದು ಅಹಂಕಾರ ಮಾತು ಹೇಳಿದ್ದಾರೆ. ಲೂಟಿ ಹೊಡೆದ ದುಡ್ಡು ತೆಲಂಗಾಣ ಚುನಾವಣೆಗಷ್ಟೇ ಅಲ್ಲದೆ ಬಳ್ಳಾರಿ ಲೋಕಸಭೆ ಚುನಾವಣೆ ಬಳಸಿದ್ದಾರೆ. ತಮ್ಮ ತಪ್ಪು ಮುಚ್ಚಿಕೊಳ್ಳಲು ಬಿಜೆಪಿಗೆ ಸವಾಲು ಹಾಕುತ್ತಿದ್ದಾರೆ ಎಂದರು.

   ರಾಜ್ಯದಲ್ಲಿ ಡೆಂಗ್ಯು ಪ್ರಕರಣ ಹೆಚ್ಚಾಗಿದೆ. ಆರೋಗ್ಯ ಸಚಿವ ಎಸಿ ಕೊಠಡಿಯಲ್ಲಿ ಕುಳಿತು ಡೆಂಗ್ಯು ಪ್ರಕರಣ ಕಡಿಮೆ ಮಾಡುವುದಾಗಿ ಹೇಳುತ್ತಿದ್ದಾರೆ. ಮಳೆಯಿಂದಾಗಿ ಅಪಾರ ಹಾನಿಯಾಗಿದೆ. ಬೆಳೆ ನಾಶವಾಗಿದೆ. ಪರಿಶಿಷ್ಟ ಜಾತಿ/ ಪಂಗಡಗಳ ನಿಧಿಯ 26 ಸಾವಿರ ಕೋಟಿ ಹಣ ಗ್ಯಾರೆಂಟಿಗೆ ವರ್ಗಾವಣೆಯಾಗಿದೆ. ಆ ಜನರಿಗೆ ಅನ್ಯಾಯವಾಗಿದೆ. ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳಲು ಸಿದ್ದರಾಮಯ್ಯ ನೈತಿಕತೆ ಕಳೆದುಕೊಂಡಿದ್ದಾರೆ. ಪರಿಶಿಷ್ಟರ ಹಣ ಲೂಟಿ ಮಾಡಿದ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿ ಇರಬರದು‘ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಪಕ್ಷದಿಂದ ಯಾರೇ ಅಭ್ಯರ್ಥಿಯಾದರೂ, ಕಾರ್ಯಕರ್ತರೆಲ್ಲರೂ ಒಮ್ಮನಸಿನಿಂದ ದುಡಿಯಬೇಕು. ಮೋದಿಯೇ ಅಭ್ಯರ್ಥಿಯೆಂದು ಭಾವಿಸಿ ದುಡಿಯಬೇಕು ಎಂದು ಮನವಿ ಮಾಡಿದರು. ಜತೆಗೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯಲ್ಲೂ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಸಲಹೆ ನೀಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap