ಮಡಿಕೇರಿ :
ಸಹಾಯಕ ಸಬ್ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಒಂದೇ ತಿಂಗಳಲ್ಲಿ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗ್ಗೆ ಮಾದೆಗೋಡು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಎಂ.ಎಸ್ ಈರಪ್ಪ ಎಂದು ಗುರುತಿಸಲಾಗಿದ್ದು, ಇವರು ಕಳೆದ ಒಂದು ವರ್ಷದಿಂದ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸಿ ಕಳೆದ ಮೇ 30 ರಂದು ಸೇವೆಯಿಂದ ನಿವೃತ್ತಿ ಹೊಂದಿದ್ದರು.
ಇಂದು ಬೆಳಗ್ಗೆ ತಮ್ಮ ಮನೆಯಲ್ಲೇ ಒಂಟಿ ನಳಿಕೆಯ ಬಂದೂಕು ಬಳಸಿ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.