ಗುರುಗ್ರಾಮ:
ಪೊಂಡ್ರಿ ಗ್ರಾಮದಲ್ಲಿ ನಡೆದ ಸಭೆಯ ಸಂದರ್ಭದಲ್ಲಿ ಕೆಲವರು ಬೇರೆ ಸಮುದಾಯದ ಜನರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಪ್ರೊಬೇಷನರ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಸಚಿನ್ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಸೋಮವಾರ ಹಾಥಿನ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153-ಎ (ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜನ) ಮತ್ತು 505 (ಸಾರ್ವಜನಿಕವಾಗಿ ಕಿಡಿಗೇಡಿತನ ಉಂಟುಮಾಡುವ ಹೇಳಿಕೆಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.