ಪಿಎಸ್ಐ ನೇರ ನೇಮಕಾತಿ ಹಗರಣ : ತನಿಖಾ ಆಯೋಗ ರಚನೆ

ಬೆಂಗಳೂರು:

    ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ 545 ಪಿಎಸ್ಐ ನೇರ ನೇಮಕಾತಿಯಲ್ಲಿನ ಅಕ್ರಮಗಳ ಕುರಿತು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಶುಕ್ರವಾರ ಆದೇಶಿಸಿದೆ.

    ಈ ಸಂಬಂಧ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗ ರಚಿಸಲಾಗಿದೆ. ಹಗರಣ ಕುರಿತ ವರದಿಯನ್ನು ಮೂರು ತಿಂಗಳಲ್ಲಿ ನೀಡುವಂತೆ ಆಯೋಗವನ್ನು ಸರ್ಕಾರ ಕೋರಿದೆ.

    2021ರ ಜನವರಿ 21ರಂದು ಪಿಎಸ್ಐಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಿತ್ತು. ನೇಮಕಾತಿಯಲ್ಲಿ ನಿಯಮಗಳ ಉಲ್ಲಂಘನೆ, ವಿವಿಧ ಹಂತಗಳಲ್ಲಿ ನಡೆದಿರುವ ಅಕ್ರಮಗಳು ಹಾಗೂ ಯಾರೆಲ್ಲಾ ದುರ್ಲಾಭ ಪಡೆದಿದ್ದಾರೆ ಎಂಬುದರ ಕುರಿತು ತನಿಖೆ ನಡೆಸುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap