ಹಾವೇರಿ :
ಜಿಲ್ಲೆಯ ಹಾನಗಲ್ ತಾಲೂಕಿನ ಕೂಡಲ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶ್ರೀಕಾಂತ್ ದೊಡ್ಡಕುರುಬರ ಇವರನ್ನು ಚಿತ್ರದುರ್ಗದ ಮಕ್ಕಳ ಸರ್ವತೋಮುಖ ಪ್ರಗತಿಗೆ ಶ್ರಮಿಸುತ್ತಿರುವ ಇವರ ಶ್ರಮಕ್ಕೆ ಪುಟಾಣಿ ವಿಜ್ಞಾನ ಬಳಗದ ರಾಜ್ಯಮಂಡಳಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಹಲವು ವರ್ಷಗಳಿಂದ ವಿಜ್ಞಾನ ಪ್ರತಿಭಾನ್ವೇಷಣಾ ಪರೀಕ್ಷೆ ಸಂಘಟಿಸಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ಪಾತ್ರವಹಿಸಿರುವುದನ್ನು ಪರಿಗಣಿಸಿ ರಾಜ್ಯ ಮಂಡಳಿಯ ಸದಸ್ಯರನ್ನಾಗಿ ನೇಮಿಸಿ ಪುಟಾಣಿ ವಿಜ್ಞಾನ ಬಳಗದ ಸಂಪಾದಕ ಚಳ್ಳಕೆರೆ ಯರ್ರಿಸ್ವಾಮಿ ಆದೇಶಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ