ಪುಸ್ತಕ ಪರಿಷ್ಕರಣೆ : ಸಿಎಂ ಜೊತೆ ಚರ್ಚಿಸಿ ನತರ ನಿರ್ಧಾರ : ಸಚಿವ

ಬೆಂಗಳೂರು:

     ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಈ ಹಿಂದಿನ ಬಿಜೆಪಿ ಸರ್ಕಾರ ಕೈಗೊಂಡಿದ್ದ ಹಲವು ತೀರ್ಮಾನಗಳನ್ನು ಮರು ಪರಿಶೀಲಿಸುತ್ತಿದೆ. ಈಗಾಗಲೇ ಪಠ್ಯಪುಸ್ತಕ ಪರಿಷ್ಕರಣೆಯ ಮರು ಪರಿಶೀಲನೆಗೆ ಮುಂದಾಗಿದ್ದು, ಕೆಲವೊಂದು ಪಠ್ಯಗಳನ್ನು ಹಂತಹಂತವಾಗಿ ತೆಗೆದುಹಾಕಲು ತೀರ್ಮಾನಿಸಿದೆ.

    ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಅವಸರದ ತೀರ್ಮಾನ ಕೈಗೊಳ್ಳದಿರಲು ನಿರ್ಧರಿಸಲಾಗಿದ್ದು, ಹೀಗಾಗಿ ಸಂಪೂರ್ಣ ಪಠ್ಯಪುಸ್ತಕ ಪರಿಷ್ಕರಣೆ ಬದಲಿಗೆ ಕೇಸರಿಕರಣವಿರುವ ವಿಷಯಗಳನ್ನು ತೆಗೆದುಹಾಕಲು ಚಿಂತಿಸಲಾಗಿದ್ದು, ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಖಾತೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

   ಇದರ ಮಧ್ಯೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈ ಹಿಂದಿನ ಬಿಜೆಪಿ ಸರ್ಕಾರ ಅನು ಮೋದಿಸಿದ್ದು, ಆದರೆ ಈಗ ಕಾಂಗ್ರೆಸ್ ಸರ್ಕಾರ ತಜ್ಞರ ಸಲಹೆ ಪಡೆದು ಮುಂದಿನ ಹೆಜ್ಜೆ ಇಡಲು ತೀರ್ಮಾನಿಸಿದೆ. ಈ ಕುರಿತಂತೆ ಬೆಳಗಾವಿಯಲ್ಲಿ ಮಾತನಾಡಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಈ ಹಿಂದೆ ನಾವು ಪ್ರತಿಪಕ್ಷದಲ್ಲಿದ್ದ ಸಂದರ್ಭದಲ್ಲೂ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ (ಎನ್‌ಇಪಿ) ಒಪ್ಪಿರಲಿಲ್ಲ. ಈಗಲೂ ಒಪ್ಪುವುದಿಲ್ಲ ಎಂದು ಹೇಳಿದ್ದು, ಹೀಗಾಗಿ NEP ಗೆ ಕೊಕ್ ನೀಡುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link