ಪೋಲಿಯೋ ಲಸಿಕಾ ಅಭಿಯಾನಕ್ಕೆ ಶೈಲಜಾ ಚಾಲನೆ

ದಾವಣಗೆರೆ:

        ಇಲ್ಲಿನ ಹೆಚ್.ಕೆ.ಆರ್. ನಗರದ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ, ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶೈಲಜಾ ಬಸವರಾಜ್ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಶೈಲಜಾ ಬಸವರಾಜ್, ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಯಶಸ್ಸಿಗೆ ಮಹಿಳೆಯರ ಪಾತ್ರ ಅತೀ ಮುಖ್ಯವಾಗಿದೆ. ಹೀಗಾಗಿ ಮಹಿಳೆಯರು ತಮ್ಮ ಐದು ವರ್ಷದ ಒಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವುದರ ಜೊತೆಗೆ ತಮ್ಮ ದೂರದ ಸಂಬಂಧಿಗಳಿಗೂ ಮಕ್ಕಳಿಗೆ ಲಸಿಕೆ ಹಾಕಿಸಬೇಕೆಂದು ಫೋನ್ ಮಾಡಿ, ಸಂದೇಶ ನೀಡಬೇಕೆಂದು ಸಲಹೆ ನೀಡಿದರು.

         ಜಿಲ್ಲಾ ಪಂಚಾಯತ್ ಸಿಇಒ ಹೆಚ್.ಬಸವರಾಜೇಂದ್ರ ಮಾತನಾಡಿ, ಇಂದಿನಿಂದ ಆರಂಭವಾಗಿರುವ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಹಕರಿಸಿ ಯಶಸ್ವಿಗೊಳಿಸಬೇಕು. ಹಾಗೂ ಜಿಲ್ಲೆಯಲ್ಲಿ 0-05 ವರ್ಷದೊಳಗಿರುವ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕೆಂದು ಹೇಳಿದರು

           ಪ್ರಾಸ್ತಾವಿಕ ಮಾತನಾಡಿದ ಆರ್‍ಸಿಹೆಚ್‍ಓ ಶಿವಕುಮಾರ, 1995ರಿಂದ ಪ್ರಾರಂಭವಾದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವು 63 ಸುತ್ತುಗಳನ್ನು ಪೂರೈಸಿದೆ. ಕರ್ನಾಟಕದಲ್ಲಿ 200 ರಲ್ಲಿ ಹಾಗೂ ಭಾರತದಲ್ಲಿ 2011 ರಲ್ಲಿ ಪೋಲಿಯೋ ಕೊನೆಯ ಪ್ರಕರಣ ಪತ್ತೆಯಾಗಿದ್ದು, 2014 ರಿಂದ ಭಾರತ ಪೋಲಿಯೋ ಮುಕ್ತ ದೇಶವಾಗಿದೆ. ಆದಾಗ್ಯೂ ನೆರೆಯ ಪಾಕಿಸ್ತಾನ ಹಾಗೂ ಅಪಘಾನಿಸ್ತಾನದಲ್ಲಿ ಪೋಲಿಯೋ ಪ್ರಕರಣಗಳ ವರದಿಯಾಗಿದ್ದರಿಂದ ಭಾರತದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಮುಂದುವರೆಸಲಾಗಿದೆ ಎಂದು ಹೇಳಿದರು.

         ಜಿಲ್ಲೆಯಲ್ಲಿ ಐದು ವರ್ಷದೊಳಗಿನ ಒಟ್ಟು 1,95,964 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಬೇಕಾಗಿದೆ. ಈ ಹಿನ್ನೆಲೆಯಲ್ಲಿ ಒಟ್ಟು 1,146 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, 2,486 ಲಸಿಕಾ ಕಾರ್ಯಕರ್ತರನ್ನು ಲಸಿಕೆ ಹಾಕಲು ಬಳಸಿಕೊಳ್ಳಲಾಗುತ್ತಿದೆ. ಮೇಲ್ವಿಚಾರಣೆಗೆ 244 ಜನರನ್ನು ನೇಮಿಸಲಾಗಿದೆ.

          ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್ ಶೋಭಾ ಪಲ್ಲಾಗಟ್ಟೆ, ತಾ.ಪಂ. ಅಧ್ಯಕ್ಷೆ ಮಮತಾ ಮಲ್ಲೇಶಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತ್ರಿಪುಲಾಂಭ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ಹೆಚ್ ವಿಜಯಕುಮಾರ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು. ಆರೋಗ್ಯ ಮೇಲ್ವಿಚಾರಕ ಆರ್.ವಿ.ಕುಪಸ್ತ ನಿರೂಪಿಸಿದರು. ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿ ಉಮಾಪತಿ ಹೆಚ್ ಸ್ವಾಗತಿಸಿದರು. ತಾಲೂಕು ಹಿರಿಯ ಆರೋಗ್ಯ ಸಹಾಯಕ ವೆಂಕಟಚಲ ವಂದಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap