ಮೈಸೂರು:
ಸೆಲ್ಫಿ ಕ್ರೇಜ್ ಇರುವವರು ಪ್ರಧಾನಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮೈಸೂರಿನ ಬಿಜೆಪಿ ಕಾರ್ಯಕರ್ತರು ಸೆಲ್ಫಿ ಜೋನ್ ರೆಡಿ ಮಾಡಿ, ಹೊಸ ತಂತ್ರ ರೂಪಿಸಿದ್ದಾರೆ.
ಹೌದು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಚಿತ್ರದುರ್ಗ ಹಾಗೂ ಮೈಸೂರಿನಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಚಿತ್ರದುರ್ಗದಲ್ಲಿ ಮೋದಿ ಸಮಾವೇಶಕ್ಕೆ ಜನಸಾಗರವೇ ಹರಿದು ಬಂದಿದೆ. ಈ ಮಧ್ಯೆ ಮೈಸೂರಿನಲ್ಲಿ ಮೋದಿ ಪ್ರಚಾರಕ್ಕೆ ಕಾರ್ಯಕರ್ತರು ಹೊಸ ತಂತ್ರ ರೂಪಿಸಿದ್ದಾರೆ.
ಪ್ರಧಾನಿಯವರೊಂದಿಗೆ ಮೊಬೈಲ್ ನಲ್ಲಿ ಸೆಲ್ಫಿ ಬೇಕು ಅನ್ನೋರಿಗೆ, ಸಮಾರಂಭದ ಮುಖ್ಯ ವೇದಿಕೆಯ ಪಕ್ಕಕ್ಕೆ ಸೆಲ್ಫಿ ಜೋನ್ ಸಿದ್ದಪಡಿಸಲಾಗಿದೆ ಎಂದು ಶಾಸಕ ರಾಮದಾಸ್ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಸಮಾವೇಶ ನಂತರ ಇಂದು ಸಂಜೆ ಮೋದಿ ಮೈಸೂರಿಗೆ ಆಗಮಿಸಲಿದ್ದಾರೆ. ಇಲ್ಲಿನ ಮಹಾರಾಜ ಕಾಲೇಜು ಕ್ರೀಡಾಂಗಣದ ಬೃಹತ್ ವೇದಿಕೆಯಲ್ಲಿ ಪ್ರಚಾರ ರ್ಯಾಲಿ ನಡೆಸಲಿದ್ದಾರೆ. ಈ ರ್ಯಾಲಿಯಲ್ಲಿ ಚಾಮರಾಜನಗರ, ಕೊಡಗು, ಮೈಸೂರು ಸುತ್ತಮುತ್ತಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳು ಸೇರಲಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ