ಬೆಂಗಳೂರು:
ಮೇ 22ರಿಂದ ಆರಂಭವಾದ ನೂತನ ಸರ್ಕಾರದ ಮೂರು ದಿನಗಳ ಮೊದಲ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ನೂತನ ಶಾಸಕರು, ಸಚಿವರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಆದರೆ, ಮಂಗಳವಾರ ಅಶುಭ ಎಂದು ಪರಿಗಣಿಸಿದ ಒಂಬತ್ತು ಶಾಸಕರು ಮಂಗಳವಾರ ಪ್ರಮಾಣ ವಚನ ಸ್ವೀಕಾರದ ಕಲಾಪಕ್ಕೆ ಗೈರಾಗಿದ್ದರು.
ಹೀಗೆ ಗೈರಾದ ಶಾಸಕರಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಎಚ್‌ಡಿ ರೇವಣ್ಣ ಸೇರಿದಂತೆ ಜೆಡಿಎಸ್‌ನ ಕೆಲವು ಶಾಸಕರು ಸೇರಿದ್ದಾರೆ. ಆದರೆ, ಕಾಂಗ್ರೆಸ್‌ನ ಮಧು ಬಂಗಾರಪ್ಪ, ಪ್ರಿಯಾ ಕೃಷ್ಣ ಸೇರಿದಂತೆ ಏಳು ಶಾಸಕರು ಸ್ಪೀಕರ್ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬುಧವಾರ ನಡೆಯಲಿರುವ ಸ್ಪೀಕರ್ ಚುನಾವಣೆಯಲ್ಲಿ ಪ್ರಮಾಣ ವಚನ ಸ್ವೀಕರಿಸದ ಶಾಸಕರಿಗೆ ಮತದಾನ ಮಾಡಲು ಅವಕಾಶವಿಲ್ಲ.
