ಪ್ರವೀಣ್ ನೆಟ್ಟರ್ ಹತ್ತೆ, ತನಿಖೆ ಪ್ರಗತಿಯಲ್ಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ತನಿಖೆಗಾಗಿ ಪೊಲೀಸರಿಗೆ ಅವಕಾಶ ಕಲ್ಪಿಸಲಾಗಿದೆ

ಬೆಂಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ಮುಕ್ತ ಅಧಿಕಾರ ನೀಡಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಕೊಲೆಗಡುಕರ ಪತ್ತೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಂಗಳೂರಿನ ತಮ್ಮ ಆರ್ ಟಿ ನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು .

ಎನ್.ಐ.ಎ ಗೆ ಪ್ರಕರಣ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. . ತಾಂತ್ರಿಕ ಹಾಗೂ ಕಾಗದಪತ್ರಗಳ ಕೆಲಸ ಜಾರಿಯಲ್ಲಿದೆ. ಆದಷ್ಟು ಬೇಗನೆ ಪ್ರಕರಣವನ್ನು ಎನ್.ಐ.ಎ ಗೆ ಹಸ್ತಾಂತರ ಮಾಡಲಾಗುವುದು ಎಂದರು. ಅನೌಪಚಾರಿಕವಾಗಿ ಎನ್.ಐ.ಎ ಗೆ ಈಗಾಗಲೇ ತಿಳಿಸಲಾಗಿದೆ. ಕೇರಳ ಮತ್ತು ಮಂಗಳೂರಿನಲ್ಲಿ ಪ್ರಾಥಮಿಕ ಮಾಹಿತಿಯನ್ನು ಪಡೆಯುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಂದಿನ ದಿನಗಳಲ್ಲಿ ಹತ್ಯೆಗೀಡಾದ ಮಸೂದ್ ಹಾಗೂ ಫಾಜಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

Recent Articles

spot_img

Related Stories

Share via
Copy link
Powered by Social Snap