ಪ್ರಾಮಾಣಿಕೆ ಸೇವೆಯಿಂದ ಮಾತ್ರ ಹೆಸರು ಶಾಶ್ವತ

ಗುಬ್ಬಿ
          ಸರ್ಕಾರಿ ನೌಕರರಿಗೆ ನಿವೃತ್ತಿ ಮತ್ತು ವರ್ಗಾವಣೆ ಅನಿವಾರ್ಯ. ತಮ್ಮ ಸೇವಾ ಅವಧಿಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದಾಗ ಮಾತ್ರ ಅವರ ಹೆಸರು ಶಾಶ್ವತವಾಗಿ ಉಳಿಯುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ ತಿಳಿಸಿದರು.
ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ದೈಹಿಕ ಶಿಕ್ಷಣ ಸಂಯೋಜಕರಾಗಿ ಸೇವೆಸಲ್ಲಿಸುತ್ತಿದ್ದ ಅಶ್ವತ್ಥಪ್ಪ ವಯೋನಿವೃತ್ತರಾದ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ವಿವಿಧ ಶಿಕ್ಷಕ ಸಂಘಟನೆಗಳು ಏರ್ಪಡಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನೌಕರರಿಗೆ ಸೇವೆಯಲ್ಲಿ ಪ್ರಾಮಾಣಿಕತೆ ಇರಬೇಕು. ಇಲಾಖೆಯ ಯಾವುದೇ ಕೆಲಸವಾಗಲಿ ನಿಷ್ಠೆಯಿಂದ ಮಾಡಿದಾಗ ಮಾತ್ರ ತಾವು ಸಲ್ಲಿಸಿದ ಸೇವೆಗೆ ಅರ್ಥ ಬರುತ್ತದೆ ಎಂದರು.
            ಅಶ್ವತ್ಥಪ್ಪ ದೈಹಿಕ ಶಿಕ್ಷಣ ಸಂಯೋಜಕರಾಗಿ ತಮ್ಮ ಕಚೇರಿಯಲ್ಲಿ ಉತ್ತಮ ಸೇವೆಸಲ್ಲಿಸುವುದರ ಜೊತೆಗೆ ಇಲಾಖೆಯ ಕೆಲಸಗಳು ಮತ್ತು ಕ್ರೀಡಾಕೂಟಗಳನ್ನು ನಡೆಸುವಲ್ಲಿ ಉತ್ತಮ ಹೆಸರು ಮಾಡಿದ್ದರು. ಅಂದಿನ ಕೆಲಸವನ್ನು ಅಂದೆ ಪೂರ್ಣಗೊಳಿಸುವ ಮೂಲಕ ಇಲಾಖೆಯಲ್ಲಿ ಶಿಕ್ಷಕರು ಮತ್ತು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದು ಅವರ ನಿವೃತ್ತಿ ಜೀವನ ಸುಖಕರವಾಗಿಲಿ ಎಂದು ಹಾರೈಸಿದರು.
         ಇದೆ ಸಂದರ್ಭದಲ್ಲಿ ವಯೋನಿವೃತ್ತರಾದ ದೈಹಿಕ ಶಿಕ್ಷಣ ಸಂಯೋಜಕರಾದ ಅಶ್ವತ್ಥಪ್ಪ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರ ಸಂಘ, ಸಹಶಿಕ್ಷಕರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ದೈಹಿಕ ಶಿಕ್ಷಕರ ಸಂಘ, ವೃತ್ತಿ ಶಿಕ್ಷಣ ಶಿಕ್ಷಕರ ಸಂಘ, ಚಿತ್ರಕಲಾ ಶಿಕ್ಷಕರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿದರು.
            ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎಸ್.ಷಡಾಕ್ಷರಿ, ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಉಮೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಯೋಗಾನಂದ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದಯಾನಂದಸರಸ್ವತಿ, ಪದಾಧಿಕಾರಿಗಳಾದ ಶಾಂತರಾಜು, ಎಸ್.ಎಲ್.ರಾಜಣ್ಣ, ಹೆಚ್.ಕೆ.ಭೈರಪ್ಪ, ಎನ್.ರಾಜಣ್ಣ, ಎ.ಬಿ.ಜಗದೀಶ್, ಸಂಜೀವಯ್ಯ, ರವೀಶ್, ಸೇರಿದಂತೆ ಶಿಕ್ಷಕರ ಸಂಘದ ಪದಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಸಿಬ್ಬಂದಿಗಳು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ದೈಹಿಕ ಸಂಯೋಜಕರು ವಯೋನಿವೃತ್ತರಾದ ಹಿನ್ನೆಲೆಯಲ್ಲಿ ಪ್ರಭಾರಿ ದೈಹಿಕ ಶಿಕ್ಷಣ ಸಂಯೋಜಕರನ್ನಾಗಿ ಮಡೇನಹಳ್ಳಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಎನ್.ರಾಜಣ್ಣ ಅವರನ್ನು ಬಿಇಓ ನಿಯೋಜನೆ ಮಾಡಿದ್ದಾರೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap