ಬೆಂಗಳೂರು:
ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ, ಒಂದು ವೇಳೆ ಶಾಂತಿ ಕದಡಿದರೆ ಅದು ಭಜರಂಗದಳ ಅಥವಾ ಆರ್‌ಎಸ್‌ಎಸ್ ಎಂಬುದನ್ನು ನಾವು ಪರಿಗಣಿಸುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನರು ಅವರನ್ನು ವಿರೋಧ ಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು. ಕೇಸರಿಕರಣ ತಪ್ಪು ಎಂದು ಹೇಳಿದ್ದೇವೆ, ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ ಎಂದು ಮಾಹಿತಿ ನೀಡಿದರು.