ಬೆಂಗಳೂರು :
ಬಳಸಿ ಬಿಸಾಡಬಹುದಾದ ಪ್ಲಾಸ್ಟಿಕ್ ಕುಡಿಯುವ ನೀರಿನ ಬಾಟಲ್‌ಗಳನ್ನು ಇನ್ನು ಮುಂದೆ ಸರ್ಕಾರಿ ಕಚೇರಿಗಳಲ್ಲಿ ಬಳಸುವಂತಿಲ್ಲ. ಪ್ಲಾಸ್ಟಿಕ್ ಬಾಟಲ್ಗಳ ಬಳಕೆಯನ್ನು ನಿಷೇಧಿಸಿ ಸರ್ಕಾರ ಶೀಘ್ರದಲ್ಲೇ ಆದೇಶ ಹೊರಡಿಸಲಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದ್ದಾರೆ. ಶೀಘ್ರದಲ್ಲೇ ಈ ಕುರಿತು ಅಧಿಕೃತ ಆದೇಶ ಪ್ರಕಟವಾಗಲಿದೆ. ಆದೇಶದ ಪ್ರಕಾರ ಸರ್ಕಾರದಿಂದ ಅನುದಾನ ಪಡೆಯುವ ಯಾವುದೇ ಸಂಸ್ಥೆಗಳು ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್‌ನಲ್ಲಿ ಕುಡಿಯುವ ನೀರು ಪೂರೈಕೆ ಮಾಡುವಂತಿಲ್ಲ.
ಸರ್ಕಾರಿ ಕಚೇರಿಗಳಲ್ಲಿ, ಸರ್ಕಾರಿ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಕುಡಿಯುವ ನೀರಿನ ಬಾಟಲ್ ಬಳಕೆ ನಿಷೇಧಿಸಲಾಗುತ್ತದೆ. ದೊಡ್ಡ ಕ್ಯಾನ್‌ಗಳಲ್ಲಿ ನೀರನ್ನು ತಂದು ಸ್ಟೀಲ್, ಗಾಜು ಅಥವ ಕಾಗದದ ಲೋಟಗಳ ಮೂಲಕ ನೀರು ಪೂರೈಕೆ ಮಾಡಬೇಕು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ