ಫಲಿತಾಂಶ -2023 : ಪ್ರಾರಂಭಿಕ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್….!

ಬೆಂಗಳೂರು:      

ವಿಧಾನಸಭೆ ಚುನಾವಣೆ 2023ರ ಇಂದು  ಫಲಿತಾಂಶ ಘೋಷಣೆಯಾಗಲಿದ್ದು  ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮತ ಎಣಿಕೆ ಕಾರ್ಯದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದ್ದು, ಅಡಳಿತಾರೂಢ ಬಿಜೆಪಿ ಕೂಡ ಪ್ರಬಲ ಪೈಪೋಟಿ ನೀಡುತ್ತಿದೆ.

ಬಿಜೆಪಿ 84 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 114 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್ 20ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇತರರು ಒಂದು ಕ್ಷೇತ್ರಗಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಬೆಳಗ್ಗೆ 7.30ಕ್ಕೆ ಮತಯಂತ್ರಗಳನ್ನು ಶೇಖರಿಸಿಡಲಾಗಿರುವ ಸ್ಚ್ರಾಂಗ್ ರೂಗಳನ್ನು ಕೇಂದ್ರ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ತೆರೆಯಲಾಗುತ್ತದೆ. ಬಳಿಕ ಮತ ಎಣಿಕೆಗೆ ಸಿದ್ದಪಡಿಸಲಾಗಿರುವ ಕೊಠಡಿಗಳಿಗೆ ಮತಯಂತ್ರಗಳನ್ನು ರವಾನಿಸಲಾಗುತ್ತದೆ. ಬೆಳಗ್ಗೆ 8 ಗಂಟೆಗೆ ಮತಎಣಿಕೆ ಕಾರ್ಯ ಆರಂಭವಾಗಲಿದ್ದು, ಮೊದಲು ಅಂಚೆಮತ ಎಣಿಕೆ ಕಾರ್ಯ ಆರಂಭವಾಗುತ್ತದೆ. ಬಳಿಕ ಮತಯಂತ್ರಣಗಳ ಎಣಿಕೆ ಕಾರ್ಯ ಆರಂಭವಾಗುತ್ತದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಮೂರು ಪಕ್ಷಗಳ ನಡುವಿನ ಭಾರಿ ಹಣಾಹಣಿ, ಅಬ್ಬರದ ಪ್ರಚಾರ, ಪ್ರತಿಷ್ಠೆಯನ್ನೇ ಪಣವಾಗಿಟ್ಟು ನಡೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 3.67 ಕೋಟಿ ಮತದಾರರು ನೀಡಿರುವ ಜನಾದೇಶ ಇನ್ನು ಕೆಲವೇ ಕ್ಷಣಗಳಲ್ಲಿ  ಬಹಿರಂಗವಾಗಲಿದೆ. ಈ ಮೂರು ಪಕ್ಷಗಳ ಜೊತೆಗೇ ಎಎಪಿ, ಬಿಎಸ್ ಪಿ ಮತ್ತು ನಟ ಉುಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳು ಕೂಡ ತಮ್ಮ ಅದೃಷ್ಟಪರೀಕ್ಷೆಗೆ ನಿಂತಿದ್ದಾರೆ. 

ಪ್ರಮುಖವಾಗಿ ಲೋಕಸಭೆ ಚುನಾವಣೆಗೆ ಒಂದು ವರ್ಷ ಇರುವಾಗ ನಡೆದಿರುವ ಈ ಚುನಾವಣೆಯ ಫಲಿತಾಂಶ ರಾಜ್ಯ ಮಾತ್ರವಲ್ಲ, ದೇಶದ ರಾಜಕೀಯ ದಿಕ್ಕನ್ನು ನಿರ್ಧರಿಸಲಿದೆ ಎಂದು ಹೇಳಲಾಗುತ್ತಿದ್ದು, ಈ ಕಾರಣಕ್ಕೆ, ಫಲಿತಾಂಶ ಇಡೀ ದೇಶದ ಗಮನ ಸೆಳೆದಿದೆ.

ವಿಧಾನಸಭೆಯ 224 ಕ್ಷೇತ್ರಗಳ ಪ್ರತಿನಿಧಿಗಳ ಆಯ್ಕೆಗೆ ಬುಧವಾರ (ಏಪ್ರಿಲ್‌ 10) ಮತದಾನ ನಡೆದಿತ್ತು. 5.07 ಕೋಟಿ ಮತದಾರರಲ್ಲಿ 3.67 ಕೋಟಿ ಮಂದಿ ಮತಚಲಾಯಿಸಿದ್ದರು. 2,615 ಅಭ್ಯರ್ಥಿಗಳು ಕಣದಲ್ಲಿದ್ದು, ಇಂದು ಅವರ ಭವಿಷ್ಯ ಹೊರಬೀಳಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link