ಬಕ್ರೀದ್ ಆಚರಣೆ : ಸಾರ್ವಜನಿಕವಾಗಿ ಪ್ರಾಣಿ ಬಲಿ ನಿಷೇಧ

ಮುಜಾಫರ್‌ನಗರ:

     ಇನ್ನೆರಡು ದಿನಗಳಲ್ಲಿ ಮುಸಲ್ಮಾನರು ಆಚರಿಸಲಾಗುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕವಾಗಿ ಪ್ರಾಣಿಗಳನ್ನು ಬಲಿ ನೀಡಿ ಅದರ ತ್ಯಾಜ್ಯವನ್ನು ಚರಂಡಿಗಳಲ್ಲಿ ಹಾಕುವುದಕ್ಕೆ ನಿಷೇದಿಸಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

      ಬಹಿರಂಗವಾಗಿ ಪ್ರಾಣಿಗಳನ್ನು ಬಲಿ ನೀಡುವುದರಿಂದ ಇತರೆ ಸಮುದಾಯದವರ ಭಾವನೆಗಳಿಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಸಿಎಂ ಸಮಜಾಯಿಷಿ ನೀಡಿದ್ದಾರೆ. 

      ಮುಖ್ಯಮಂತ್ರಿಗಳ ಆದೇಶ ಪಾಲಿಸಲು ಬದ್ಧರಾಗಿದ್ದೇವೆ ಎಂದು ಖಚಿತಪಡಿಸಿರುವ ಮುಜಾಫರ್‌ನಗರ ಜಿಲ್ಲಾಧಿಕಾರಿ ರಾಜೀವ್ ಶರ್ಮಾ, ‘ಸಿಎಂ ಆದೇಶ ಸಂಬಂಧ ಜಿಲ್ಲೆಯ ಅಧಿಕಾರಿಗಳ ಜತೆ ಚರ್ಚಿಸಲಾಗುತ್ತದೆ. ಬಕ್ರೀದ್ ಸಂಬಂಧ ಶಾಂತಿ-ವ್ಯವಸ್ಥೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಉಭಯ ಸಮುದಾಯದ ಮುಖಂಡರ ಜತೆ ಸಭೆ ನಡೆಸುತ್ತೇವೆ’ ಎಂದು ತಿಳಿಸಿದ್ದಾರೆ. 

      ಶನಿವಾರ ರಾತ್ರಿ ವೀಡಿಯೋ ಕಾನ್ಫರೆನ್ಸ್ ಮೂಲಕ ಪೊಲೀಸ್ ಇಲಾಖೆ ಹಾಗೂ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ಕಾನೂನು ಹಾಗೂ ಸುವ್ಯವಸ್ಥೆ ಕಾಯ್ದಕೊಳ್ಳುವ ನಿಟ್ಟಿನಲ್ಲಿ ಸಿಎಂ ಈ ಆದೇಶ ಹೊರಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap