ಬೆಂಗಳೂರು
ಕಳೆದ 15ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದ್ದ ಹಂಪಿ ಉತ್ಸವಕ್ಕೆ ಮತ್ತೆ ಜೀವ ಬಂದಂತಾಗಿದೆ. ಬಳ್ಳಾರಿ ಜಿಲ್ಲಾ ಉಸ್ತವಾರಿ ಹಾಗೂ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಈ ಬಾರಿ ಹಂಪಿ ಉತ್ಸವ ನಡೆಯುತ್ತದೆ ಎಂದು ಘೋಷಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂಪಿ ಉತ್ಸವಕ್ಕಾಗಿ 10ಕೋಟಿ ರೂಗಳ ಅನುದಾನವನ್ನು ಘೋಶಿಸಿದ್ದು ಇದರ ಸಹಾದಿಂದ ಉತ್ಸವ ಇನ್ನೂ ವಿಜೃಂಬಣೆಯಿಂದ ಮಾಡುವ ಇಂಗಿತ ವ್ಯಕ್ತಪಡಿಸಿದರು, ದುರಾದೃಷ್ಠವಶಾತ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಮೇಲೆ ಮಾನ್ಯ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬಜೆಟ್‌ನಲ್ಲಿ ಹಂಪಿ ಉತ್ಸವಕ್ಕೆ ಯಾವುದೇ ಅನುದಾನವನ್ನು ತೆಗೆದಿರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಈ ವರ್ಷ ಹಂಪಿ ಉತ್ಸವ ನಡೆಯುವುದಿಲ್ಲವೆಂದೇ ಭಾವಿಸಲಾಗಿತ್ತು. ಆದರೆ ಬಳ್ಳಾರಿ ಉಸ್ತುವಾರಿ ಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ಬುಧವಾರ ಧ್ವಜಾರೋಹಣ ನೆರವೇರಿಸಿದ ಡಿಕೆ ಶಿವಕುಮಾರ್ ಜಿಲ್ಲಾ ಅಭಿವೃದ್ಧಿ ಸಭೆ ನಡೆಸಿ ಈ ಬಾರಿ ಹಂಪಿ ಉತ್ಸವ ನಡೆಯಲಿದೆ ಎಂದು ಪ್ರಕಟಿಸಿದರು.
ನವೆಂಬರ್ 3ರಿಂದ 5ರವರೆಗೆ ಮೂರು ದಿನಗಳ ಕಾಲ ಪ್ರತಿ ವರ್ಷದಂತೆ ಅದ್ಧೂರಿಯಾಗಿ ಹಂಪಿ ಉತ್ಸವ ನೆರವೇರಲಿದೆ, ಉತ್ಸವದ ಯಶಸ್ವಿಗಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿವಿಧ ಸಮಿತಿಗಳನ್ನು ರಚಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
