ಬೆಂಗಳೂರು :
ರವೀಂದ್ರ ಕಲಾಕ್ಷೇತ್ರದಲ್ಲಿ ಡಾ.ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಬಸವ ವೇದಿಕೆಯ ವತಿಯಿಂದ ಜರುಗಿದ ‘ಬಸವ ಜಯಂತಿ ಹಾಗೂ ‘ಬಸವಶ್ರೀ’ ಮತ್ತು ‘ವಚನ ಸಾಹಿತ್ಯಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು, ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ; ಪ್ರಶಸ್ತಿ ವಿತರಣೆ ಮಾಡಲಾಯಿತು.
ಇದೇ ವೇಳೆ, ಬಸವಶ್ರೀ ಪ್ರಶಸ್ತಿ ಪುರಸ್ಕೃತರು, ನಾಡಿನ ಹಿರಿಯ ಸಾಹಿತಿಗಳಾದ ನಾಡೋಜ ಶ್ರೀ ಗೊ.ರು. ಚನ್ನಬಸ್ಸಪ್ಪನವರು ಹಾಗೂ ವಚನ ಸಾಹಿತ್ಯಶ್ರಿ ಪ್ರಶಸ್ತಿ ಪುರಸ್ಕೃತರಾದ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರ ಹಾಗೂ ಪ್ರಖ್ಯಾತ ವಚನ ಗಾಯಕಿ ಎಂ.ಡಿ ಪಲ್ಲವಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆನು.
ಈ ಸಮಾರಂಭದಲ್ಲಿ, ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಬಸವರಾಜ್ ಬೊಮ್ಮಾಯಿಯವರು, ಎಸ್. ಷಡಕ್ಷರಿಯವರು, ಬಸವ ವೇದಿಕೆಯ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ ಅವರು ಹಾಗೂ ಪ್ರಶಸ್ತಿ ಪುರಸ್ಕೃತರು, ಗಣ್ಯಮಾನ್ಯರು ಉಪಸ್ಥಿತರಿದ್ದರು.








