ಬಸವ-ಬುದ್ಧರಂತೆ ಯುವಜನತೆ ಜನಮುಖಿಗಳಾಗಿ ಸಮಾನತೆ ಸಾರಬೇಕು

ತುಮಕೂರು:

              ಬುದ್ಧ, ಬಸವ, ಗಾಂಧೀಜಿ ಅವರುಗಳಂತೆ ಯುವ ಜನತೆ ಜನಮುಖಿಗಳಾಗಿ ಮಾನವ ಸಮಾನತೆ ಸಾರಬೇಕು ಎಂದು ಎಂಪ್ರೆಸ್ ಬಾಲಕಿಯರ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಸಿದ್ಧಲಿಂಗಪ್ಪ ತಿಳಿಸಿದರು.
               ಅವರು ನಗರದ ಯೂನಿಯನ್ ಕ್ರಿಶ್ಚಿಯನ್ ಕಾಲೇಜಿನಲ್ಲಿ 2018-19ನೇ ಸಾಲಿನ ಕ್ರೀಡೆ, ಎನ್.ಎಸ್.ಎಸ್., ರೆಡ್‍ಕ್ರಾಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಾ ಯುವ ಜನತೆ ತಮ್ಮ ಸಣ್ಣಪುಟ್ಟ ಸೇವೆಗಳನ್ನು ವಿದ್ಯಾರ್ಥಿ ದಿಸೆಯಿಂದಲೇ ಮಾಡಬೇಕು. ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಮನುಷ್ಯ ಸಮಾನತೆಯನ್ನು ಸಾರಬೇಕು ಎಂದರು.
ತುಮಕೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಡಾ. ಲೋಕೇಶ್ ಎಂ.ಯು. ಮಾತನಾಡಿ ಯುವ ಜನತೆ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ಜೊತೆಗೆ ತಮ್ಮ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಎನ್.ಎಸ್.ಎಸ್.ನಲ್ಲಿ ಸಕ್ರಿಯವಾಗಿ ಭಾಗವಹಿಸಿ ಎಂದು ತಿಳಿಸಿದರು.
                 ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಜೋಯಲ್ ಜಯಪ್ರಕಾಶ್ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಎಲ್ಲಾ ವಿಧವಾದ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಸಾಧಕರ ಬದುಕಿನ ಕಡೆ ಗಮನಿಸಿ ಅದರಂತೆ ಮೌಲ್ಯಾಧಾರಿತ ಬದುಕನ್ನು ರೂಪಿಸಿಕೊಳ್ಳಿ ಎಂದು ಕರೆ ನೀಡಿದರು. ಸಮಾರಂಭದಲ್ಲಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ಎಂ.ಮಹದೇವು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರೆ, ಆಂಗ್ಲ ವಿಭಾಗದ ಮುಖ್ಯಸ್ಥ ಪ್ರೊ.ಜಯಪ್ರಕಾಶ್ ಕಾಲೇಜಿನ ಸಂಕ್ಷಿಪ್ತ ಪರಿಚಯ ಮಾಡಿದರು. ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ವೈ.ಆರ್.ಸದಾಶಿವಯ್ಯ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ.ಶೈಲಕುಮಾರಿ ನಿರೂಪಿಸಿದರು.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link