ದಾವಣಗೆರೆ:
ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕೈದಾಳೆ ಕ್ರಾಸ್ ಬಳಿ ಮಂಗಳವಾರ ಸಂಭವಿಸಿದೆ.
ದಾವಣಗೆರೆಯ ಕೆಟಿಜೆ ನಗರದ ಶರತ್ (೨೫) ಹಾಗೂ ಭಾಷನಗರದ ಅಶ್ರಫ್ (೨೫) ಮೃತ ದುರ್ದೈವಿಗಳಾಗಿದ್ದಾರೆ. ಇವರಿಬ್ಬರು ದಾವಣಗೆರೆಯಿಂದ ಕುಕ್ಕವಾಡ ಗ್ರಾಮಕ್ಕೆ ಕೆಲಸಕ್ಕಾಗಿ ಬೈಕ್ನಲ್ಲಿ ತೆರಳುತ್ತಿದ್ದರು. ಸರ್ಕಾರಿ ಬಸ್ ನವಿಲೇಹಾಳ್ನಿಂದ ದಾವಣಗೆರೆಗೆ ಬರುತಿತ್ತು.
ಈ ಎರಡರ ಮಧ್ಯೆ ಕೈದಾಳೆ ಕ್ರಾಸ್ ಬಳಿಯಲ್ಲಿ ಮುಖಾಮುಖಿ ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆಯಲ್ಲಿ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಬಸ್ ಚಾಲಕ ಕರಿಗೌಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಹದಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page
