ಇದೇ ನನ್ನ ಕೊನೆಯ ಬಸ್ ಸ್ಟಾಪ್ : ಆಯನೂರು ಮಂಜುನಾಥ

ಶಿವಮೊಗ್ಗ:

       ನನ್ನ ಕ್ಷೇತ್ರ ಹಾಗು ಕ್ಷೇತ್ರದ ಜನತೆಯ ಭವಿಷ್ಯದ ದೃಷ್ಠಿಯಿಂದ ಕಾಂಗ್ರೆಸ್ ಪಕ್ಷಕ್ಕೆ ನಾನು ಇಂದು ಸೇರ್ಪಡೆಗೊಳ್ಳುತ್ತೇನೆ . ಇದೇ ನನ್ನ ಕೊನೆಯ ಬಸ್ ಸ್ಟಾಪ್ ಎಂದು ಆಯನೂರು ಮಂಜುನಾಥ್ ಅವರು ಹೇಳಿದ್ದಾರೆ.

     ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಪಕ್ಷದ ಎಲ್ಲಾ ಮುಖಂಡರು ನನ್ನ ನಿಲುವಿಗೆ ಸಹಮತ ನೀಡಿ, ಸಹಕಾರ ನೀಡುವ ಭರವಸೆ ನೀಡಿದ್ದಾರೆಂದು ಹೇಳಿದರು.
    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದೆ. ಆದರೆ, ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್ ಅವಕಾಶ ನೀಡಿತ್ತು. ಜೆಡಿಎಸ್ ನಲ್ಲಿ ಯಾವುದೇ ಗೊಂದಲ ಇರಲಿಲ್ಲ. ಆದರೆ, ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಸೇರುತ್ತಿದ್ದೇನೆ. ಜೆಡಿಎಸ್ ತೊರೆಯುತ್ತಿರುವುದಕ್ಕೆ ಬೇಸರವಿಲ್ಲ. ರಾಜಕಾರಣವೇ ಒಂದು ಅವಕಾಶ. ಕಾಂಗ್ರೆಸ್ ನನ್ನ ಕೊನೆಯ ಬಸ್ ಸ್ಟಾಪ್ ಎಂದು ಕಾಣುತ್ತದೆ. ಬಿಜೆಪಿಯಿಂದ ನನಗೆ ಆಹ್ವಾನ ಬಂದಿಲ್ಲ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap