ದೆಹಲಿ:
ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ನವದೆಹಲಿ ಯಲ್ಲಿರುವ ಯಮುನಾ ನದಿಯ ತಟದಲ್ಲಿರುವ ಸ್ಮೃತಿ ಸ್ಥಳದಲ್ಲಿ ವಾಜಪೇಯಿ ಪಂಚಭೂತಗಳಲ್ಲಿ ಲೀನರಾದರು.
ಪುರೋಹಿತರ ತಂಡದ ನೇತೃತ್ವದಲ್ಲಿ ಸಂಬಂಧಿಕರು ಉತ್ತರ ಪ್ರದೇಶದ ಬ್ರಾಹ್ಮಣ ಸಂಪ್ರದಾಯದಂತೆ ವಾಜಪೇಯಿ ಅವರ ಸಾಕು ದತ್ತು ಪುತ್ರಿ ನಮಿತಾ ಭಟ್ಟಾಚಾರ್ಯ ಮುಂದಾಳತ್ವದಲ್ಲಿ ಅವರ ಪತಿ, ಅಳಿಯ ರಂಜನ್ ಭಟ್ಟಾಚಾರ್ಯ ಅವರು ವಿಧಿ ವಿಧಾನಗಳನ್ನು ನೆರವೇರಿಸಿದರು.
ದೇಶಕಂಡ ಧೀಮಂತ ನಾಯಕರಲ್ಲೊಬ್ಬರಾದ ಅಟಲ್ ಜೀ ಅವರ ನಿಧನದ ಹಿನ್ನೆಲೆಯಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರತ ಸರ್ಕಾರ 7 ದಿನಗಳ ಕಾಲ ಶೋಕಾಚರಣೆ ಮಾಡಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
