ಬಾಲಾಸೋರ್‌ ದರಂತ : ಪ್ರಧಾನಿ ತುರ್ತು ಸಭೆ

ನವದೆಹಲಿ:

       ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದ ಭೀಕರ ರೈಲು ದುರಂತ ದುರ್ಘಟನೆಯಲ್ಲಿ 238ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಘಟನೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತುರ್ತು ಸಭೆ ಕರೆದಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

      ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಮೋದಿಯವರು ತುರ್ತು ಸಭೆಯನ್ನು ಕರೆದಿದ್ದು, ಸಂಬಂಧಿತ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

     ಅಧಿಕಾರಿಗಳೊಂದಿಗಿನ ತುರ್ತು ಸಭೆ ಬಳಿಕ ಮೋದಿಯವರು ಒಡಿಶಾಗೆ ಭೇಟಿ ನೀಡಲಿದ್ದು, ಅಪಘಾತ ಸಂಭವಿಸಿದ ಸ್ಥಳ ಬಾಲಸೋರ್’ಗೆ ಭೇಟಿ ನೀಡಲಿದ್ದಾರೆ. ನಂತರ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೂ ಭೇಟಿ ನೀಡಲಿದ್ದಾರೆಂದು ಮೂಲಗಳು ತಿಳಿಸಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap