ಬಿಜೆಪಿಗೆ ಜನ ವಿಶ್ರಾಂತಿ ನೀಡಿದ್ದಾರೆ : ಡಿ ಕೆ ಶಿ

ಬೆಂಗಳೂರು

    ಬಿಜೆಪಿ ನಾಯಕರಿಗೆ ರಾಜ್ಯದ ಜನ ವಿಶ್ರಾಂತಿ ಪಡೆಯಲು ಮನೆಗೆ ಕಳುಹಿಸಿದ್ದಾರೆ. ಆದರೆ ಅವರು ಮಾಡಲು ಕೆಲಸವಿಲ್ಲದೆ ಅನಗತ್ಯವಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.

   ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಜನರಿಗೆ ಕೊಟ್ಟಿರುವ ಭರವಸೆಗಳನ್ನು ಈಡೇರಿಸುತ್ತಿದೆ. ಬಿಜೆಪಿ ನಾಯಕರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಮೊದಲು ಧರಣಿ ಮಾಡಬೇಕು. ಅಕ್ಕಿಯ ದಾಸ್ತಾನು ಇದ್ದರೂ ಕೂಡ ಕೇಂದ್ರ ಸರ್ಕಾರ ಹಾಗೂ ಭಾರತ ಆಹಾರ ಪ್ರಾಧಿಕಾರ ರಾಜ್ಯ ಸರ್ಕಾರಕ್ಕೆ ಅಕ್ಕಿ ನೀಡಲು ನಿರಾಕರಿಸಿದೆ. ಕೇಂದ್ರದ ಈ ನಿಲುವಿನ ವಿರುದ್ಧ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ತಂಡ ಹೋರಾಟ ಮಾಡಲಿ ಎಂದು ಸಲಹೆ ಮಾಡಿದರು.

   ಏನೇ ಮಾಡಿದರು ನಮ್ಮ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಪ್ರಚಾರ ಸಿಗುತ್ತಿದ್ದು, ಅದಕ್ಕಾಗಿ ಅವರಿಗೆ ಧನ್ಯವಾದಗಳು. ಜನ ನಮಗೆ ಆಡಳಿತ ಮಾಡಲು ಅವಕಾಶ ನೀಡಿದ್ದು ನಾವು ಜನಪರ ಆಡಳಿತ ಮಾಡಿ ಅವರ ನಂಬಿಕೆ ಉಳಿಸಿಕೊಳ್ಳುತ್ತೇವೆ. ಮುಖ್ಯಮಂತ್ರಿ ಕಚೇರಿಯಲ್ಲಿ ಕೆಲಸ ಪಡೆಯಲು 30 ಲಕ್ಷ ನೀಡಬೇಕು ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಪ್ರಶ್ನಿಸಿದಾಗ, “ಕುಮಾರಸ್ವಾಮಿಯವರು ಚುನಾವಣೆಯಲ್ಲಿ ಕಡಿಮೆ ನಂಬರ್ ಬಂದಿದೆ ಎಂಬ ಬೇಸರದಲ್ಲಿ ಮಾತನಾಡುತ್ತಿದ್ದಾರೆ. ಹೀಗಾಗಿ ಅವರ ಮಾತುಗಳು ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ.

    ಅವರ ಆರೋಪ ಸತ್ಯಕ್ಕೆ ದೂರವಾದುದು. ಸರ್ಕಾರದ ಯಾವುದೇ ಕಚೇರಿಯಲ್ಲಿ ಹಣ ಪಡೆದು ಕೆಲಸ ನೀಡಲಾಗುತ್ತಿಲ್ಲ. ಅವರ ಬಳಿ ದಾಖಲೆ ಇದ್ದರೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಲಿ ತನಿಖೆ ಮಾಡಿಸಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅದಕ್ಕೆ ಅವಕಾಶವಿದೆ” ಎಂದು ಪ್ರತಿಕ್ರಿಯಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap