ಜಗಳೂರು:
ಸದೃಢ ಭಾರತ ನಿರ್ಮಾಣಕ್ಕಾಗಿ ಮತ್ತೊಮ್ಮೆ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಬೇಕು ಎಂಬ ಉದ್ದೇಶದಿಂದ ತಾಲ್ಲೂಕಿನ ಯಾದವ ಸಮಾಜ ಬಿಜೆಪಿಯನ್ನು ಬೆಂಬಲಿಸಲಿದೆ ಎಂದು ಯಾದವ ಸಮಾಜದ ತಾಲ್ಲೂಕು ಅಧ್ಯಕ್ಷ ಕೃಷ್ಣಮೂರ್ತಿ ಹೇಳಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಶುಕ್ರುವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಯಾದವ ಸಮಾಜ ರಾಮಚಂದ್ರ ಅವರನ್ನು ಬೆಂಬಲಿಸಿತ್ತು. ಹಾಗೇಯೇ ಈ ಬಾರಿ ಲೋಕ ಸಭಾ ಚುನಾವಣೆಯಲ್ಲಿ ಜಿ.ಎಂ ಸಿದ್ದೇಶ್ವರ್ ಅವರನ್ನು ಬೆಂಬಲಿಸುವ ಮೂಲಕ ಯಾದವ ಸಮಾಜ ಹೆಚ್ಚಿನ ಮತ ನೀಡಿ ಗೆಲ್ಲಿಸುವ ಗುರಿ ಹೊಂದಲಾಗಿದೆ.ಜಿಲ್ಲೆಯಲ್ಲಿ ಜನರೊಂದಿಗೆ ಬೆರೆಯುವ ಸಂಸದ ಜಿ.ಎಂ ಸಿದ್ದೇಶ್ವರ್ , ಶಾಸಕ ಎಸ್.ವಿ ರಾಮಚಂದ್ರ ಯಾದವ ಸಮಾಜವನ್ನು ಅಭಿವೃದ್ದಿ ಪಡಿಸಲು ಶ್ರಮಿಸಿದ್ದಾರೆ.
ಸಂಘದ ಖಜಾಂಚಿ ಅಮರೇಂದ್ರಪ್ಪ ಮಾತನಾಡಿ, ದೇಶಕ್ಕೆ ನರೇಂದ್ರ ಮೋದಿಯಂತ ಸಮರ್ಥವಾದ ನಾಯಕ ಅವಶ್ಯಕತೆ ಇದ್ದು ಅವರು ಪ್ರಧಾನಿಯಾಗಲು ಕೈ ಬಲಪಡಿಸಲು ಜಿಲ್ಲೆಯಿಂದ ಜಿಎಂ ಸಿದ್ದೇಶ್ವರ್ ಅವರನ್ನು ಗೆಲ್ಲಿಸುವ ಮೂಲಕ ಶಾಶ್ವತ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಜಾರಿಗಾಗಿ ಸಂಸದರೊಂದಿಗೆ ಹೋರಾಟಕ್ಕೆ ಸಮಾಜ ಸಿದ್ದವಾಗಿದೆ ಎಂದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಕಾಟಪ್ಪ, ಬಾಲರಾಜ್, ಗೊಲ್ಲರಹಟ್ಟಿ ತಿಪ್ಪೇಸ್ವಾಮಿ, ಪ್ರಕಾಶ್, ಶಿವಕುಮಾರ್, ಬಾಲಣ್ಣ ಸೇರಿದಂತೆ ಮತ್ತಿತರಿದ್ದರು.