ಬಿಜೆಪಿಯ 104 ಶಾಸಕರು ಹುಲಿಗಳಿದ್ದಂತೆ : ಈಶ್ವರಪ್ಪ

ಶಿವಮೊಗ್ಗ:

      ಬಿಜೆಪಿಯ 104 ಶಾಸಕರು ಹುಲಿಗಳಿದ್ದಂತೆ, ಯಾರನ್ನೂ ಮುಟ್ಟಲು ಸಾಧ್ಯವಿಲ್ಲ ಎಂದು ಬಿಜೆಪಿ ಶಾಸಕ ಹಾಗೂ ಹಿರಿಯ ಮುಖಂಡ ಕೆ.ಎಸ್​.ಈಶ್ವರಪ್ಪ ಹೇಳಿದ್ದಾರೆ.  

      ಬಿಜೆಪಿಯ ಐದು ಶಾಸಕರನ್ನು ನಾವು ಸೆಳೆಯುತ್ತೇವೆ ಎನ್ನುವ ಸಿಎಂ ಕುಮಾರಸ್ವಾಮಿ ರವರ ಹೇಳಿಕೆಗೆ ಪ್ರತಿಕ್ರಿಯಿಸಿ ಮಾತನಾಡಿ ಈ ರೀತಿಯ ಹೇಳಿಕೆಯನ್ನು ನೀಡಿದರು. ನಾವು ಆಪರೇಷನ್ ಕಮಲ ಮಾಡಿದರೆ ಕಾಂಗ್ರೆಸ್, ಜೆಡಿಎಸ್ ಅದನ್ನು ತಪ್ಪು ಎನ್ನುತ್ತದೆ.  ತಪ್ಪು-ಸರಿ ಯಾವುದು ಎಂಬುದನ್ನು ರಾಜ್ಯದ ಜನರೇ ನಿರ್ಧರಿಸುತ್ತಾರೆ ಎಂದರು.

      ಬಿಜೆಪಿಯು ರಾಜ್ಯ ಸರ್ಕಾರವನ್ನು ಉರುಳಿಸುವ ಪ್ರಯತ್ನವನ್ನು ಮಾಡುತ್ತಿಲ್ಲ, ಆದರೆ ರಾಜ್ಯ ಸರ್ಕಾರ ಯಾರ ಪ್ರಯತ್ನವಿಲ್ಲದೆ ತಾನಾಗಿಯೇ ಉರುಳಿ ಹೋಗಲಿದೆ, ಸರ್ಕಾರಕ್ಕೆ ಜಾರಕಿಹೊಳಿ ಸಹೋದರರು ಗಡುವು ನೀಡಿದ್ದಾರೆ, ರಾಜ್ಯ ಸರ್ಕಾರವನ್ನು ಕೆಳಗಿಳಿಸಲು ಬಿಜೆಪಿ ಯಾವ ಕಸರತ್ತನ್ನೂ ಮಾಡುತ್ತಿಲ್ಲ ಎಂದು ತಿಳಿಸಿದರು.

Recent Articles

spot_img

Related Stories

Share via
Copy link