ಬಿಜೆಪಿ ಮಾಡುತ್ತಿರುವ ಆರೋಪ ಆಧಾರರಹಿತ :ಸಿಎಂ

ಬೆಂಗಳೂರು

    ಬರಘೋಷಣೆಯ ಮಾನದಂಡಗಳ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕಾದ ರಾಜ್ಯ ಬಿಜೆಪಿ ನಾಯಕರು ಆ ಕೆಲಸವನ್ನು ಮಾಡದೆ ಪರಿಸ್ಥಿತಿಯ ರಾಜಕೀಯ ಲಾಭ ಪಡೆಯುವ ದುರುದ್ದೇಶದಿಂದ ಸರ್ಕಾರದ ವಿರುದ್ದ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದ್ದಾರೆ.

     ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬರಗಾಲದ ಘೋಷಣೆ ಮತ್ತು ಪರಿಹಾರಕ್ಕೆ ಸಂಬAಧಿಸಿದ ಕೇಂದ್ರ ಸರ್ಕಾರದ ಬರನಿರ್ವಹಣೆ ಕೈಪಿಡಿ 2020 ಮಾನದಂಡಗಳಲ್ಲಿನ ಸಮಸ್ಯೆಗಳ ಕಾರಣದಿಂದಾಗಿಯೇ ಬರಗಾಲ ಘೋಷಣೆ ವಿಳಂಬವಾಗಿದೆ. ಈ ಮಾನದಂಡಗಳನ್ನು ಬದಲಾವಣೆ ಮಾಡದಿದ್ದರೆ ಬರಪೀಡಿತ ಪ್ರದೇಶದದಲ್ಲಿ ಪರಿಹಾರ ಕಾರ್ಯ ನಡೆಸಿ ನೊಂದ ಜನರಿಗೆ ನೆರವಾಗಲು ಸಾಧ್ಯವಾಗದು ಎಂದಿದ್ದಾರೆ.

     ಬರ ಘೋಷಣೆಗೆ ಅಗತ್ಯವಾಗಿರುವ ಮಾನದಂಡಗಳನ್ನು ಮರುಪರಿಶೀಲಿಸಬೇಕಾದ ಅನಿವಾರ್ಯತೆಯನ್ನು ವಿವರಿಸಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಹಿಂದೆಯೇ ಪತ್ರ ಬರೆದಿದ್ದರೂ ಕೇಂದ್ರ ಸರ್ಕಾರದಿಂದ ಇಲ್ಲಿಯ ವರೆಗೆ ಉತ್ತರ ಬಂದಿಲ್ಲ. ಮಾನದಂಡಗಳಲ್ಲಿನ ಬದಲಾವಣೆ ಕೇವಲ ಕರ್ನಾಟಕ ರಾಜ್ಯದ ದೃಷ್ಟಿಯಿಂದ ಮಾತ್ರವೇ ಅಲ್ಲ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಒಕ್ಕೂಟವಾದ ಭಾರತ ಗಣರಾಜ್ಯದ ಹಿತದೃಷ್ಟಿಯಿಂದಲೂ ಅತ್ಯಗತ್ಯವಾಗಿದೆ ಎಂದು ಹೇಳಿದ್ದಾರೆ.

    ಕರ್ನಾಟಕ ವೈವಿಧ್ಯಮಯವಾದ 14 ಕೃಷಿ-ಹವಾಮಾನ ವಲಯಗಳನ್ನು ಹೊಂದಿದ್ದು, ಪ್ರತಿಯೊಂದು ವಲಯದಲ್ಲೂ ತನ್ನದೇ ಆದ ಸವಾಲುಗಳಿವೆ. ಪ್ರಸಕ್ತ ಇರುವ ಮಾನದಂಡಗಳು ಎಲ್ಲ ವಲಯಗಳಿಗೂ ಏಕರೂಪವಾಗಿದ್ದು, ಇದು ಬರ ಘೋಷಣೆಗೆ ಅಗತ್ಯವಾದ ಬದಲಾವಣೆಗಳನ್ನು ಒಳಗೊಳ್ಳುವುದಿಲ್ಲ. ಹಾಗಾಗಿ, ವಲಯವಾರು ನಿರ್ದಿಷ್ಟ ಸೂಚ್ಯಂಕಗಳನ್ನು ಬರ ಘೋಷಣೆಗೆ ರೂಪಿಸುವುದು ಅಗತ್ಯವಾಗಿರುತ್ತದೆ.

    ಪ್ರಸಕ್ತ ಬರ ಘೋಷಣೆಯ ಮಾನದಂಡಗಳು ಹವಾಮಾನಶಾಸ್ತಿಯ, ಕೃಷಿ ಹಾಗೂ ಜಲಶಾಸ್ತಿçÃಯ ಬರಗಳ ಸೂಚ್ಯಂಕಗಳನ್ನು ತನ್ನ ಮಾನದಂಡಗಳಲ್ಲಿ ಕ್ರೋಢೀಕರಿಸಿಕೊಂಡಿದೆ. ಆದರೆ, ಸದಾಕಾಲವೂ ಇದು ಅನ್ವಯಯೋಗ್ಯವೆಂದೇನೂ ಅಲ್ಲ. ಹವಾಮಾನ ಶಾಸ್ತಿಯ ಬರವನ್ನು ಪರಿಗಣಿಸಿಯೇ ನೋಡುವುದಾದರೆ, ಮುಂಗಾರಿನಲ್ಲಿ ಆರಂಭದಲ್ಲಿ ಮಳೆ ಕೊರತೆ ಇದ್ದದ್ದು ಆನಂತರ ಪ್ರಬಲ ಮಾರುತಗಳ ಪರಿಣಾಮ ಸುದಾರಿಸಬಹುದು. ಇತ್ತೀಚಿನ ವರ್ಷಗಳಲ್ಲಿ ಇದು ಹೆಚ್ಚು ಘಟಿಸಿದೆ.

    ಆಗಸ್ಟ್-ಸೆಪ್ಟೆಂಬರ್ ಅವಧಿಯಲ್ಲಿ ಮಳೆ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ, ಮುಂಗಾರು ಆರಂಭದಲ್ಲಿ ಮಳೆ ಕೊರತೆಯ ಕಾರಣಕ್ಕೆ ಬಿತ್ತನೆ ಪ್ರಮಾಣ ಇಳಿಕೆಯಾಗಿರುತ್ತದೆ. ಪರಿಣಾಮ ಬೆಳೆಯಲ್ಲಿ ಕೊರತೆಯುಂಟಾಗಿ ಕೃಷಿ ಆಧರಿತ ಬರದ ಸನ್ನಿವೇಶ ಉದ್ಭವಿಸುತ್ತದೆ. ಅದರೆ, ಇದೇ ವೇಳೆ ಸುಧಾರಿಸಿದ ಮಳೆಯ ಮಾರುತಗಳಿಂದಾಗಿ ಹವಾಮಾನ ಮತ್ತು ಜಲಶಾಸ್ತಿಯ ಬರ ಕಾಣದೆ ಹೋಗಬಹುದು. ಈ ಸೂಕ್ಷನ್ನು ಬರ ಘೋಷಣೆಗೆ ಕಡ್ಡಾಯವಾಗಿರುವ ಮಾನದಂಡಗಳು ಒಳಗೊಳ್ಳಬೇಕಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

     ಭಾರತೀಯ ಹವಾಮಾನ ಇಲಾಖೆಯು ದೇಶಾದ್ಯಂತ ಶೇ.10 ಮಳೆಯ ಕೊರತೆಯನ್ನೂ ಸಹ ಬರದ ವರ್ಷ ಎಂದು ತೀರ್ಮಾನಿಸಿ ಘೋಷಿಸುತ್ತದೆ. ಆದರೆ, ಮಾನದಂಡಗಳ ಪ್ರಕಾರ ರಾಜ್ಯಗಳು ಬರ ಘೋಷಣೆಯನ್ನು ಮಾಡಬೇಕಾದರೆ ಮಳೆಯ ವ್ಯತ್ಯಯ ಸೂಚ್ಯಂಕವು ಶೇ.60ಕ್ಕಿಂತ ಹೆಚ್ಚಿರಬೇಕು ಎನ್ನಲಾಗಿದೆ. ನಾವು ಈ ಎರಡರ ನಡುವಿನ ಅಂತರವನ್ನು ಗಣನೆಗೆ ತೆಗೆದುಕೊಳ್ಳಬೇಕಾಗಿದೆ. ಮಳೆಯ ವ್ಯತ್ಯಯ ಸೂಚ್ಯಂಕವು ಶೇ.20ರಿಂದ ಶೇ.59ರವರೆಗೆ ಇದ್ದರೂ ಅದು ಬರ ಘೋಷಣೆಗೆ ಅಗತ್ಯವಾದ ಕ್ರಿಯಾಕಾರಣ ಅಂಶವೆAದು ಪರಿಗಣಿಸಬೇಕು.

    ಶುಷ್ಕ ಅಥವಾ ಒಣ ಹವೆಯ ವಿಚಾರದಲ್ಲಿಯೂ ಕೈಪಿಡಿಯಲ್ಲಿ ಕಠಿಣವಾದ ನಿಯಮಾವಳಿ ಇದೆ. ಬರ ಘೋಷಿಸಲು ಮೂರು ವಾರಗಳ ಒಣಹವೆಯನ್ನು ಸೂಚ್ಯಂಕವಾಗಿ ಪರಿಗಣಿಸಲಾಗಿದೆ. ವಿಪರ್ಯಾಸವೆಂದರೆ, ಎರಡು ಮೂರು ವಾರಗಳ ಒಣಹವೆ ಕೂಡ ಬೆಳೆಯ ಮೇಲೆ ಗಂಭೀರ ದುಷ್ಪರಿಣಾಮ ಉಂಟು ಮಾಡಿ ಸರಿಪಡಿಸಲಾಗದ ಬೆಳೆಹಾನಿಗೆ ಕಾರಣವಾಗುತ್ತದೆ. ಹಾಗಾಗಿ ಮಳೆ ಕುರಿತಾದ ಸೂಚ್ಯಂಕದಲ್ಲಿ ಒಣಹವೆಯ ಅವಧಿಯನ್ನು ಎರಡು ವಾರಗಳಿಗಿಂತ ಕಡಿಮೆ ಎಂದು ಪರಿಗಣಿಸಬೇಕು ಎಂದಿದ್ದಾರೆ.

    ಬರ ಘೋಷಣೆಯ ವಿಳಂಬಕ್ಕೆ ಕಾರಣವಾಗುವ ಕೈಪಿಡಿಯಲ್ಲಿರುವ ಮತ್ತೊಂದು ಪ್ರಮುಖ ಮಾನದಂಡವೆಂದರೆ ಅದು ರಾಜ್ಯ ಸರ್ಕಾರವು ?ಇನ್ನು ಯಾವುದೇ ಬಿತ್ತನೆ ಚಟುವಟಿಕೆ? ನಡೆಯುವುದಿಲ್ಲ ಎಂದು ಬೆಳೆ ಹಂಗಾಮಿನ ವೇಳೆ ಕೇಂದ್ರ ಸರ್ಕಾರಕ್ಕೆ ಕಡ್ಡಾಯವಾಗಿ ಪ್ರಮಾಣಪತ್ರ ಸಲ್ಲಿಸಬೇಕಿರುವುದು. ಇದು ಇನ್‌ಪುಟ್ ಸಬ್ಸಿಡಿ ಪರಿಕಲ್ಪನೆಗೆ ವ್ಯತಿರಿಕ್ತವಾಗಿದೆ. ಇನ್‌ಪುಟ್ ಸಬ್ಸಿಡಿ ಪರಿಕಲ್ಪನೆಯು ತಕ್ಷಣದ ಪರಿಹಾರ ನೀಡುವ ಮೂಲಕ ಆರ್ಥಿಕ ಚಟುವಟಿಕೆಯನ್ನು ಪುನರಾರಂಭಿಸಬೇಕು ಎನ್ನುತ್ತದೆ. ಆದರೆ, ಮೇಲೆ ಹೇಳಿದ ಕೇಂದ್ರದ ನಿಯಮಾವಳಿಯಿಂದಾಗಿ ರಾಜ್ಯ ಸರ್ಕಾರವು ಬರ ಘೋಷಣೆ ಮಾಡಿ ತಕ್ಷಣ ಪರಿಹಾರಕ್ಕೆ ಮುಂದಾಗಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap