ಬಿಜೆಪಿ ವಿರುದ್ಧ ತನಿಖಾಸ್ತ್ರ ಪ್ರಯೋಗ ಮಾಡಿದ ಕಾಂಗ್ರೆಸ್…!

ಬೆಂಗಳೂರು:

     ಬಿಜೆಪಿ ಸರ್ಕಾರದ ಕಾಮಗಾರಿಗಳಿಗೆ ತಡೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಮತ್ತೊಂದು ಶಾಕ್ ನೀಡಿದ, ಬಿಜೆಪಿ ವಿರುದ್ಧ ತನಿಖಾಸ್ತ್ರ ಪ್ರಯೋಗ ಮಾಡಿದೆ.

      ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಸಿದ್ದರಾಮಯ್ಯ ಅವರು, ವಿವಿಧ ಇಲಾಖೆಗಳಿಂದ ಅನುಷ್ಠಾನಗೊಳ್ಳುತ್ತಿರುವ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸಿ, ತನಿಖೆಯ ನಂತರವೇ ಪುನರಾರಂಭಿಸುವಂತೆ ಸೂಚಿಸಿದ್ದರು.

     ಹಿಂದಿನ ಸರ್ಕಾರದ ಅವಧಿಯಲ್ಲಿ ಇಂಧನ, ಲೋಕೋಪಯೋಗಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಸೇರಿದಂತೆ ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್, ಕಾವೇರಿ ನೀರಾವರಿ ನಿಗಮ ಲಿಮಿಟೆಡ್ ಸೇರಿದಂತೆ ವಿವಿಧ ನಿಗಮಗಳು ಹಣ ಮಂಜೂರು ಮಾಡದೆ ಟೆಂಡರ್ ಕರೆದಿದ್ದವು.

     ಹಣದ ಕೊರತೆ ಮತ್ತು ಭೂಸ್ವಾಧೀನ ಸಮಸ್ಯೆಗಳಿದ್ದರೂ, ಈ ಇಲಾಖೆಗಳಿಂದ ವಿವಿಧ ಕಾಮಗಾರಿಗಳಿಗೆ ಟೆಂಡರ್‌ಗಳನ್ನು ಮಾಡಲಾಗಿದೆ. ಅಲ್ಲದೆ, ಇದಕ್ಕಾಗಿ 20 ಸಾವಿರ ಕೋಟಿ ರೂ.ಗಳ ಅಗತ್ಯವಿದ್ದು, ನಿಯಮ ಉಲ್ಲಂಘಿಸಿ ಟೆಂಡರ್ ಕರೆಯಲಾಗಿದೆ, ಈ ಕಾಮಗಾರಿಗಳು ಅವೈಜ್ಞಾನಿಕವಾಗಿವೆ ಎಂಬ ಆರೋಪಗಳಿವೆ.

    ಹೀಗಾಗಿ ಈ ಅಕ್ರಮಗಳ ಬಗ್ಗೆ ತನಿಖೆ ನಡೆಸುವ ಅಗತ್ಯವಿದ್ದು, ತನಿಖೆ ಪೂರ್ಣಗೊಳ್ಳುವವರೆಗೂ ಕಾಮಗಾರಿಗಳ ಸ್ಥಗಿತಗೊಳಿಸುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link